ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಸಾಹಿತಿ ಮುಮ್ತಾಜ್ ಬೇಗಂ ನಿಧನ

Last Updated 6 ಏಪ್ರಿಲ್ 2021, 8:24 IST
ಅಕ್ಷರ ಗಾತ್ರ

ಪಡುಬಿದ್ರಿ: ಐದು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಉಡುಪಿ ಜಿಲ್ಲೆಯ ಬೆಳಪು ನಿವಾಸಿ ಮುಮ್ತಾಜ್ ಬೇಗಂ (72) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ಮೃತರಿಗೆ ಇಬ್ಬರು ಪುತ್ರಿಯರು, ಹಾಗೂ ಓರ್ವ ಪುತ್ರ ಇದ್ದಾರೆ. ಮುಮ್ತಾಜ್ ಅವರಿಗೆ ಕೋವಿಡ್ ತಗುಲಿತ್ತು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಅವ್ಯಕ್ತ, ಪರದೇಶಿ, ವರ್ತುಲ, ಬಂದಳಿಕೆ, ಚಿಂಪಿ, ಸರ್ವ ಋತುಗಳೂ ನಿನಗಾಗಿ, ಅಂಕುರ ಸೇರಿದಂತೆ ಹಲವು ಕಥೆ, ಕವನ, ಕಾದಂಬರಿಗಳನ್ನು ಮುಮ್ತಾಜ್ ಬರೆದಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗೆ ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ, ಮೇವುಂಡಿ ಮಲ್ಲಾರಿ ಮಕ್ಕಳ‌ ಕಥಾ ಪುರಸ್ಕಾರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ, ಹಿರಿಯ ನಾಗರಿಕರ ಸಾಹಿತ್ಯ ಪ್ರಶಸ್ತಿ, ಬಸವ ಸಾಹಿತ್ಯ ಕಲಾವೇದಿಕೆಯ ಬಸವಜ್ಯೋತಿ ಪ್ರಶಸ್ತಿಗಳು ಅವರಿಗೆ ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT