ಗುರುವಾರ , ಜುಲೈ 29, 2021
21 °C

ಯಕ್ಷಗಾನದ ಹಿರಿಯ ಭಾಗವತ ಮತ್ಯಾಡಿ ನರಸಿಂಹ ಶೆಟ್ಟಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಉಡುಪಿ: ಬಡಗುತಿಟ್ಟಿನ ಹಿರಿಯ ಭಾಗವತರಾದ ಮತ್ಯಾಡಿ ನರಸಿಂಹ ಶೆಟ್ಟಿ (95 ವರ್ಷ) ಶನಿವಾರ (10-07-2021) ಕುಂದಾಪುರದ ಮತ್ಯಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು.

ದೀರ್ಘಕಾಲ ಮಂದಾರ್ತಿ ಮೇಳದಲ್ಲಿ ಕಲಾಸೇವೆಗೈದ ಇವರು ಕೊಡವೂರು, ಪೆರ್ಡೂರು, ಅಮೃತೇಶ್ವರೀ, ಮಂದಾರ್ತಿ, ಮಾರಣಕಟ್ಟೆ ಹಾಗೂ ಕಳುವಾಡಿ ಮೇಳಗಳಲ್ಲಿ ಒಟ್ಟು ಸುಮಾರು 45 ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಯಕ್ಷಗಾನ ಭಾಗವತರಾಗಿದ್ದರು. ಇವರಿಗೆ 40ಕ್ಕೂ ಹೆಚ್ಚು ಪೌರಾಣಿಕ ಪ್ರಸಂಗಗಳು ಕಂಠಸ್ಥವಾಗಿದ್ದವು.

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಯಕ್ಷಗಾನ ಕಲಾರಂಗವು ಭಾಗವತ ನಾರ್ಣಪ್ಪ ಉಪ್ಪೂರರ ಸ್ಮರಣಾರ್ಥ ಪ್ರಥಮ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಮೃತರು ಮೂರು ಹೆಣ್ಣು ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು