ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉದ್ಯಮದಲ್ಲಿ ಸೇವೆಯ ಪಾಲು ಇರಲಿ’

ದಿಶಾ ಸರ್ಜಿಕಲ್ಸ್ ಅಂಡ್ ಲೈಫ್‌ಕೇ‌ರ್ ಉದ್ಘಾಟಿಸಿದ ಸಚಿವೆ ಶೋಭಾ ಕರಂದ್ಲಾಜೆ
Last Updated 15 ಅಕ್ಟೋಬರ್ 2022, 16:08 IST
ಅಕ್ಷರ ಗಾತ್ರ

ಉಡುಪಿ: ಸಮಾಜಮುಖಿ ಕಾರ್ಯಗಳ ಜತೆಗೆ ಉದ್ಯಮದಲ್ಲಿ ಮುನ್ನಡೆದರೆ ಯಶಸ್ಸು ಖಚಿತವಾಗಿ ಸಿಗುತ್ತದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸಲಹೆ ನೀಡಿದರು.

ಉಡುಪಿಯ ಹಳೆ ಡಯಾನ ಸರ್ಕಲ್‌ನ ಬಳಿ ಕಲ್ಪನಾ ರೆಸಿಡೆನ್ಸಿಯಲ್ಲಿ ದಿಶಾ ಸರ್ಜಿಕಲ್ಸ್‌ ಅಂಡ್‌ ಲೈಫ್‌ಕೇ‌ರ್ ಉದ್ಘಾಟಿಸಿ ಮಾತನಾಡಿದ ಅವರು, ಗುಣಮಟ್ಟದ ಉತ್ಪನ್ನಗಳೊಂದಿಗೆ ಉತ್ತಮ ಸೇವೆ ಒದಗಿಸಿದಾಗ ಸಹಜವಾಗಿ ಜನರ ಬೇಡಿಕೆ ಹೆಚ್ಚಾಗಲಿದೆ. ಪ್ರಧಾನಿ ಮೋದಿ ಸಂಕಲ್ಪವಾದ ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಯಡಿ ಆರಂಭಗೊಂಡಿರುವ ಉದ್ಯಮ ಅಭಿವೃದ್ಧಿಯಾಗಲಿಎ ಎಂದು ಆಶಿಸಿದರು.

ಬ್ಯಾಂಕಿಂಗ್, ಶಿಕ್ಷಣ, ವೈದ್ಯಕೀಯ ಕ್ಷೇತ್ರಗಳಲ್ಲಿ ಉಡುಪಿ ಜಿಲ್ಲೆ ಪ್ರಪಂಚದಾದ್ಯಂತ ಹೆಸರು ಗಳಿಸಿದೆ. ಕೊರೊನಾ ಸಂದರ್ಭ ರಾಜ್ಯಕ್ಕೆ ಎನ್ 95 ಮಾಸ್ಕ್ ಒದಗಿಸುವ ಮೂಲಕ ಭರತ್ ಶೆಟ್ಟಿ ನೇತೃತ್ವದ ಸಂಸ್ಥೆ ಶ್ಲಾಘನೀಯ ಕಾರ್ಯ ಮಾಡಿದೆ. ವಿದ್ಯೆ ಮತ್ತು ಆರೋಗ್ಯ ಉದ್ಯಮವಾಗಬಾರದು. ಸೇವೆಯೂ ಇರಬೇಕು ಎಂದರು.

ಕರ್ಲಾನ್ ಲಿಮಿಟೆಡ್ ಸಂಸ್ಥೆಯ ಸಿಎಂಡಿ ಟಿ. ಸುಧಾಕರ್ ಪೈ ಅಧ್ಯಕ್ಷತೆ ವಹಿಸಿದ್ದರು, ಮೈಸೂರು ಎಲೆಕ್ಟಿಕಲ್‌ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್, ಹೈಟೆಕ್‌ ಆಸ್ಪತ್ರೆಯ ನಿರ್ದೇಶಕ ಡಾ.ಟಿ.ಎಸ್. ರಾವ್ ಮಾತನಾಡಿ ಶುಭ ಹಾರೈಸಿದರು.

ನಗರಸಭಾ ಸದಸ್ಯೆ ಮಾನಸ ಸಿ. ಪೈ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಖಾರಾಮ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಸಂಸ್ಥೆಯ ಪಾಲುದಾರರಾದ ಭರತ್ ಶೆಟ್ಟಿ ಅಂಬಲಪಾಡಿ, ಜಯ ಸನಿಲ್, ಗೋಪಾಲಕೃಷ್ಣ ಶೆಟ್ಟಿ ಇದ್ದರು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾ‌ರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT