ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಕ್ಷಗಾನ ಕಲಾರಂಗದ ಸೇವೆ ಅನನ್ಯ: ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Published 8 ಜುಲೈ 2024, 7:24 IST
Last Updated 8 ಜುಲೈ 2024, 7:24 IST
ಅಕ್ಷರ ಗಾತ್ರ

ಕುಂದಾಪುರ: ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಸೌಕೂರು ಮೇಳದ ಯಕ್ಷಗಾನ ಕಲಾವಿದ ನಂದಕುಮಾರ ಪಾಣಾರ ಅವರಿಗಾಗಿ ನಿರ್ಮಿಸಿದ ‘ಲಲಿತಾ ಸದನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಳಿದ ಸಂಘಟನೆಗಳಿಗೆ ಮಾದರಿಯಾಗುವಂತೆ, ಸಮಾಜಮುಖಿಯಾಗಿ 50 ವರ್ಷಗಳನ್ನು ಪೂರೈಸಿದ್ದು ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ ಎಂದು ಹೇಳಿದರು.

ಕುಂದಾಪುರ ತಾಲ್ಲೂಕಿನ ಬಿದ್ಕಲ್ಕಟ್ಟೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿಯವರು ವಹಿಸಿದ್ದರು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ  ಭಾಗವಹಿಸಿದ್ದರು. ಲೆಕ್ಕಪರಿಶೋಧಕರಾದ, ಕುಂದಾಪುರ ಆಚಾರ್ಯ ಕುಟುಂಬದ ವಸಂತ ಆಚಾರ್ಯ ಮತ್ತು ಶೋಭಾ ವಿ. ಆಚಾರ್ಯ ಅವರ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ, ಸಂಸ್ಥೆಯ 54ನೇ  ಮನೆಯಾಗಿದ್ದು, ಕಾರ್ಯಕ್ರಮದಲ್ಲಿ  ಆಚಾರ್ಯ ಕುಟುಂಬದ ಸಹೋದರರಾದ ಗಣೇಶ ಆಚಾರ್ಯ, ಸುರೇಶ ಆಚಾರ್ಯ, ದಿನೇಶ್ ಆಚಾರ್ಯ ಹಾಗೂ ವಸಂತ ಆಚಾರ್ಯರ ಪುತ್ರ ಸಿದ್ದಾರ್ಥ ಆಚಾರ್ಯ ಉಪಸ್ಥಿತರಿದ್ದರು.

ಸೌಕೂರು ಮೇಳದ ಯಜಮಾನರೂ ಸಂಸ್ಥೆಯ ಉಪಾಧ್ಯಕ್ಷರೂ ಆದ ಪಿ. ಕಿಶನ್ ಹೆಗ್ಡೆ,  ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ದಾನಿಗಳಾದ ಯು. ವಿಶ್ವನಾಥ ಶೆಣೈ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಗಣೇಶ್ ಶೆಟ್ಟಿ ಮಂಡಳ್ಳಿ, ಸಂಸ್ಥೆಯ ಸದಸ್ಯರಾದ ಎಚ್. ಎನ್. ಶೃಂಗೇಶ್ವರ, ವಿಜಯಕುಮಾರ್ ಮುದ್ರಾಡಿ, ಬಿ. ಭುವನ ಪ್ರಸಾದ್ ಹೆಗ್ಡೆ, ಸಂತೋಷ್ ಕುಮಾರ್ ಶೆಟ್ಟಿ, ಅಶೋಕ ಎಂ., ಎಚ್.ಎನ್. ವೆಂಕಟೇಶ್, ಅನಂತರಾಜ ಉಪಾಧ್ಯಾಯ, ಗಣೇಶ್ ಬ್ರಹ್ಮಾವರ, ಡಾ. ರಾಜೇಶ್ ನಾವುಡ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್, ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಧನ್ಯವಾದ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT