ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಗೆ ಲೈಂಗಿಕ ಹಲ್ಲೆ: 20 ವರ್ಷ ಕಠಿಣ ಸಜೆ

Last Updated 25 ಸೆಪ್ಟೆಂಬರ್ 2019, 13:27 IST
ಅಕ್ಷರ ಗಾತ್ರ

ಉಡುಪಿ: ಬಾಲಕಿ ಮೇಲಿನ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿ ಬಸಪ್ಪ (72) ಎಂತಾತನಿಗೆ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯ ಬುಧವಾರ 20 ವರ್ಷ ಕಠಿಣ ಸಜೆ ವಿಧಿಸಿದೆ.

ಸೆಕ್ಷನ್‌ 375ರಡಿ ಲೈಂಗಿಕ ಹಲ್ಲೆ ನಡೆಸಿದ್ದಕ್ಕೆ 10 ವರ್ಷ ಕಠಿಣ ಸಜೆ, ₹ 1 ಸಾವಿರ ದಂಡ ಹಾಗೂ ಪೋಕ್ಸೊ ಕಾಯ್ದೆಯ ಕಲ‌ಂ 6ರ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಹಾಗೂ ₹ 1 ಸಾವಿರ ದಂಡ ವಿಧಿಸಲಾಗಿದೆ. ಬಾಲಕಿಗೆ ಪರಿಹಾರ ನೀಡಲು ಕಾನೂನು ಪ್ರಾಧಿಕಾರಕ್ಕೆ ಆದೇಶಿಸಲಾಗಿದೆ.

ಆರೋಪಿಗೆ ಹಿಂದೆ ಜಾಮೀನು ಮಂಜೂರಾಗಿದ್ದರೂ ಆತನ ಸಂಬಂಧಿಗಳು ಜಾಮೀನು ನೀಡಲು ಮುಂದೆ ಬಂದಿರಲಿಲ್ಲ. ಜತೆಗೆ, 72 ವರ್ಷದ ವ್ಯಕ್ತಿಗೆ ಪೋಕ್ಸೊ ಕಾಯ್ದೆಯಡಿ ಗರಿಷ್ಠ ಶಿಕ್ಷೆಯಾಗುತ್ತಿರುವುದು ಜಿಲ್ಲೆಯಲ್ಲಿ ಮೊದಲು ಎಂದು ಸರ್ಕಾರಿ ವಿಶೇಷ ಅಭಿಯೋಜಕ ವಿಜಯ ವಾಸು ಪೂಜಾರಿ ತಿಳಿಸಿದರು.

ಘಟನೆ ಹಿನ್ನೆಲೆ:

2018ರ ಫೆ.6ರಂದು ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಬಸಪ್ಪ ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ 4 ವರ್ಷದ ಬಾಲಕಿ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದ. ವಿಷಯ ತಿಳಿದ ತಾಯಿ 7ರಂದು ಠಾಣೆಗೆ ದೂರು ನೀಡಿದ್ದರು. 8ರಂದು ಆರೋಪಿಯನ್ನು ಬಂಧಿಸಲಾಗಿತ್ತು.

ಅಂದಿನ ತನಿಖಾಧಿಕಾರಿಯಾಗಿದ್ದ ಕಾರ್ಕಳ ಇನ್ಸ್‌ಪೆಕ್ಟರ್ ಜಾಯ್ ಅಂಟೋನಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆರೋಪಿಯ ಕೃತ್ಯ ಸಾಬೀತಾಗಿದೆ ಎಂದು ಮಂಗಳವಾರ ಜಿಲ್ಲಾ ನ್ಯಾಯಾಧೀಶರಾದ ಸಿ.ಎಂ. ಜೋಶಿ ಆದೇಶ ನೀಡಿ ತೀರ್ಪು ಕಾಯ್ದಿರಿಸಿದ್ದರು. ಬುಧವಾರ ಶಿಕ್ಷೆಯ ಪ್ರಮಾಣ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT