ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಗೆ‌ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಅಜೀವ ಕಾರಾಗೃಹ ಶಿಕ್ಷೆ

Last Updated 23 ಜೂನ್ 2022, 3:56 IST
ಅಕ್ಷರ ಗಾತ್ರ

ಉಡುಪಿ: ಪರಿಶಿಷ್ಟ ಜಾತಿಯ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿ ರಜೀಬ್‌ ಅಲಿಯಾಸ್‌ ಜೋಟು ಎಂಬಾತನಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಅಜೀವ ಕಾರಾಗೃಹ ಶಿಕ್ಷೆ ವಿಧಿಸಿದೆ.

ಪೋಕ್ಸೋ ಕಾಯ್ದೆಯಡಿಯಲ್ಲಿ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹ 56 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ.

ಘಟನೆ ಹಿನ್ನೆಲೆ:

ಪಶ್ಚಿಮ ಬಂಗಾಳ ಮೂಲದ ರಜೀಬ್ 2018ರ ಫೆಬ್ರುವರಿಯಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿಗೆ ಆಪ್ತ ಸಮಾಲೋಚನೆ ನಡೆಸಿದಾಗ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ಬಹಿರಂಗವಾಗಿತ್ತು. ಘಟನೆ ಸಂಬಂಧ ರಜೀಬ್ ಹಾಗೂ ಇತರ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು.

46 ಸಾಕ್ಷಿಗಳಲ್ಲಿ 28 ಮಂದಿಯ ವಿಚಾರಣೆ ನಡೆದಿತ್ತು. ಬಾಲಕಿಯ ಸಾಕ್ಷ್ಯ ಹಾಗೂ ಇತರರ ಸಾಕ್ಷ್ಯಗಳು ಪ್ರಾಸಿಕ್ಯೂಷನ್ ಪರವಾಗಿದ್ದರಿಂದ ರಜೀಬ್ ಅಪರಾಧಿ ಎಂದು ನ್ಯಾಯಾಲಯ ತೀರ್ಮಾನಿಸಿ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಉಳಿದ ಐವರು ಆರೋಪಿಗಳು ಖುಲಾಸೆಗೊಂಡಿದ್ದಾರೆ.

ದಂಡದಲ್ಲಿ ₹ 16,000 ಸರ್ಕಾರಕ್ಕೆ ಹಾಗೂ ₹ 40,000 ನೊಂದ ಬಾಲಕಿಗೆ ನೀಡಲು ಆದೇಶಿಸಿರುವ ನ್ಯಾಯಾಲಯ ಸಂತ್ರಸ್ತೆಗೆ ₹ 5 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಪ್ರಕರಣದಲ್ಲಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಪ್ರಾಸಿಕ್ಯೂಶನ್ ಪರವಾಗಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT