ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ ತಡೆ ಸಮಿತಿ ಕಡ್ಡಾಯ

ಖಾಸಗಿ ಸಂಸ್ಥೆಗಳ ಮಾಲೀಕರಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಸೂಚನೆ
Last Updated 9 ಫೆಬ್ರುವರಿ 2021, 13:04 IST
ಅಕ್ಷರ ಗಾತ್ರ

ಉಡುಪಿ: ಸುಪ್ರೀಂ ಕೋರ್ಟ್ ಆದೇಶದಂತೆ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ಸಮಿತಿ ರಚನೆ ಮಾಡುವುದು ಕಡ್ಡಾಯ. 10ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಮಿತಿ ರಚನೆಯಾಗಬೇಕು. ವಾರ್ಷಿಕ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹೇಳಿದರು.

ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ವಿವಿಧ ಖಾಸಗಿ ಸಂಸ್ಥೆಗಳಿಗೆ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಅಧಿನಿಯಮ 2019ರ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಬಹುತೇಕ ಕಾರ್ಖಾನೆ, ಆಸ್ಪತ್ರೆ, ವಾಣಿಜ್ಯ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡದಿರುವುದು ಹಾಗೂ ವಾರ್ಷಿಕ ವರದಿ ಸಲ್ಲಿಸದಿರುವುದು ಗಮನಕ್ಕೆ ಬಂದಿದೆ. ಸರ್ಕಾರಿ ಸೇರಿದಂತೆ ಎಲ್ಲ ಖಾಸಗಿ ಉದ್ಯೋಗದಾತ ಸಂಸ್ಥೆಗಳು ಕಡ್ಡಾಯವಾಗಿ ಆಂತರಿಕ ದೂರು ಸಮಿತಿ ರಚಿಸಿ, ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಇಲ್ಲದೆ ಮುಕ್ತ ವಾತಾವರಣದಲ್ಲಿ ಕಾರ್ಯ ನಿರ್ವಹಿಸುವ ವ್ಯವಸ್ಥೆ ಕಲ್ಪಿಸಬೇಕು. ₹ 50,000 ದಂಡ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಮಿಕ ನಿರೀಕ್ಷಕರು ಖಾಸಗಿ ಸಂಸ್ಥೆ ಹಾಗೂ ಕಾರ್ಖಾನೆಗಳಿಗೆ ಭೇಟಿ ನೀಡಿದಾಗ ಸಮಿತಿ ರಚಿಸಿರುವ ಕುರಿತು ಕಡ್ಡಾಯವಾಗಿ ಮಾಹಿತಿ ನೀಡಬೇಕು. ಉದ್ಯೋಗದಾತರು ಪ್ರತಿ ವರ್ಷ ಡಿಸೆಂಬರ್ ಅಂತ್ಯಕ್ಕೆ ರಚಿಸಲಾಗಿರುವ ಸಮಿತಿ ಹಾಗೂ ಪ್ರಕರಣಗಳ ಕುರಿತು ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆಗೆ ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕು ಎಂದು ಕುಮಾರ್ ಸೂಚಿಸಿದರು.

ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಕೆಲಸದ ಸ್ಥಳದಲ್ಲಿ ನಡೆಯಬಹುದಾದ ವಿವಿಧ ರೀತಿಯ ಲೈಂಗಿಕ ಕಿರುಕುಳದ ಕುರಿತು ಮಾಹಿತಿ ನೀಡಿದ ಅರೋಪ ಸಾಬೀತಾದರೆ ಪ್ರಕರಣದ ಗಂಭೀರತೆಗೆ ಅನುಗುಣವಾಗಿ ವಿಧಿಸಬಹುದಾದ ದಂಡನೆಗಳ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶೇಷಪ್ಪ, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಪ್ರಸನ್ನ ಕುಮಾರ್ ಹಾಗೂ ತಾಲ್ಲೂಕಿನ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT