ಶನಿವಾರ, ಜನವರಿ 28, 2023
15 °C

ಕೃಷ್ಣಮಠದ ರಥಬೀದಿಗೆ ಬಂದಿದ್ದ ಶಾರಿಕ್‌ !

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಂಗಳೂರಿನಲ್ಲಿ ಈಚೆಗೆ ಆಟೋರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ ಅಕ್ಟೋಬರ್‌ನಲ್ಲಿ ಕೃಷ್ಣಮಠದ ರಥಬೀದಿಯಲ್ಲಿ ಅಡ್ಡಾಡಿದ್ದ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

ಶಾರಿಕ್‌ನ ಮೊಬೈಲ್ ಕರೆಗಳ ವಿವರಗಳನ್ನು ಪರಿಶೀಲಿಸಿದಾಗ ಆತನ ಮೊಬೈಲ್‌ನಿಂದ ಉಡುಪಿಯಿಂದ ಕರೆ ಹೋಗಿರುವುದು ತಿಳಿದು ಬಂದಿದೆ. ಈ ಮಾಹಿತಿಯ ಆಧಾರದಲ್ಲಿ ಮಂಗಳೂರು ಪೊಲೀಸರು ಕೃಷ್ಣಮಠದ ರಥಬೀದಿಗೆ ಬಂದು ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಅಂಗಡಿ ಮಾಲೀಕರಿಂದ ಮಾಹಿತಿ ಕಲೆ ಹಾಕಿದ್ದಾರೆ.

ಶಾರಿಕ್ ಮೊಬೈಲ್‌ ಬಳಸಿದ್ದ ವೃದ್ಧೆ ?

ರಥಬೀದಿಯಲ್ಲಿ ಅಡ್ಡಾಡುವ ವೃದ್ಧೆಯೊಬ್ಬರು ಶಾರಿಕ್‌ನ ಮೊಬೈಲ್‌ ಪಡೆದುಕೊಂಡು ಮೊಮ್ಮಗನಿಗೆ ಕರೆ ಮಾಡಿ ಮಾತನಾಡಿದ್ದು, ಕರೆ ಆಧಾರದ ಮೇಲೆ ಪೊಲೀಸರು ಉಡುಪಿಗೆ ಬಂದು ತನಿಖೆ ನಡೆಸಿದ್ದಾರೆ. ಅ.16ರಂದು ಉಡುಪಿಯ ರಥಬೀದಿಗೆ ಬಂದಿದ್ದ ಶಾರಿಕ್‌ ಬಳಿಕ ಕಾರ್ಕಳ ಮಾರ್ಗವಾಗಿ ಬಂಟ್ವಾಳಕ್ಕೆ ತೆರಳಿದ್ದಾನೆ. ಶಿವಮೊಗ್ಗದಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿದ್ದು ತಲೆ ಮರೆಸಿಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೃಷ್ಣಮಠಕ್ಕೆ ಹೆಚ್ಚಿನ ಭದ್ರತೆ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು