ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿಲ್ಪಾ ಸಾವಿನ ಪ್ರಕರಣ: ಸಿಐಡಿ ತನಿಖೆಗೆ ವಹಿಸಿ’

Last Updated 27 ಮೇ 2022, 15:07 IST
ಅಕ್ಷರ ಗಾತ್ರ

ಉಡುಪಿ: ಕುಂದಾಪುರದ ಶಿಲ್ಪಾಳ ಸಾವಿನ ಹಿಂದೆ ಲವ್ ಜಿಹಾದ್ ಷಡ್ಯಂತ್ರವಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು. ಆರೋಪಿಗಳಾದ ಅಜೀಜ್ ದಂಪತಿಯನ್ನು ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿ ಅಜೀಜ್‌ ಯುವತಿ ಶಿಲ್ಪಾಳ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ತೆಗೆದು ಬ್ಲಾಕ್‌ಮೇಲ್ ಮಾಡಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ್ದಾನೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಶಿ‌ಲ್ಪಾಳ ಸಾವು ಖಂಡಿಸಿ ಮೇ 30ರಂದು ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಮೃತ ಶಿಲ್ಪಾ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಪ್ರಾಂತ ಸಂಚಾಲಕ ಕೆ.ಆರ್.ಸುನೀಲ್, ವಿಎಚ್‌ಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು, ಮುಖಂಡರಾದ ಗಿರೀಶ್‌, ಪ್ರದೀಪ್ ಮಾರ್ಕೋಡು, ಪೂರ್ಣಿಮಾ ಸುರೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT