ಶಿರ್ವ: ‘ಅಭಿವೃದ್ಧಿಯ ವಿಷಯದಲ್ಲಿ ಯಾವುದೇ ಪಕ್ಷ ರಾಜಕೀಯವಿಲ್ಲ. ಶಿರ್ವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಹೊಂದಿದ್ದು, ಇದು ಪಟ್ಟಣ ಪಂಚಾಯಿತಿ ಆಗುವ ಪೂರ್ಣ ಅರ್ಹತೆ ಹೊಂದಿದೆ. ಪಟ್ಟಣ ಪಂಚಾಯಿತಿ ಆದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಲಭ್ಯವಾಗುತ್ತದೆ. ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಶಿರ್ವ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆ ಮಾಡಲು ಶ್ರಮಿಸುವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಶಿರ್ವ ಮಹಿಳಾ ಸೌಧದಲ್ಲಿ ಜರುಗಿದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ₹940 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮಗಳಿಗೆ ಅವರು ಚಾಲನೆ ನೀಡಿ ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ₹10 ಕೋಟಿ ಬಿಡುಗಡೆ ಮಾಡಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರು ಸ್ವಾಭಿಮಾನದಿಂದ ಜೀವಿಸುವ ಕಾರ್ಯ ಮಾಡಿದ್ದೇನೆ. ಮಹಿಳೆಯರ ಸುರಕ್ಷತೆಗಾಗಿ ಅಕ್ಕಾ ಪಡೆ ಹಾಗೂ ಗೃಹಲಕ್ಷ್ಮೀ ಸಹಕಾರಿ ಬ್ಯಾಂಕ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದೇವೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಭತ್ಯೆಯನ್ನು ₹1 ಸಾವಿರ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದೇವೆ ಎಂದರು.

ಅಧ್ಯಕ್ಷತೆ ವಹಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ‘ವಿಪರೀತ ಮಳೆಯಿಂದಾಗಿ ರಸ್ತೆ ದುರಸ್ತಿಗೆ ತೊಂದರೆ ಉಂಟಾಗಿದೆ. ರಸ್ತೆಯೊಂದಿಗೆ ಚರಂಡಿ ನಿರ್ಮಾಣವೂ ಅಗತ್ಯ ಎಂದರು.

ಮುಖಂಡ ವಿನಯ್ಕುಮಾರ್ ಸೊರಕೆ ಸ್ವಾಗತಿಸಿದರು. ಜಿಲ್ಲಾಧಿಕಾರಿ ಸ್ವರೂಪ ಡಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕಾಪು ತಾಲ್ಲೂಕು ಕಾರ್ಯನಿರ್ವಹಕಾಧಿಕಾರಿ ಜೇಮ್ಸ್ ಡಿ.ಸಿಲ್ವ, ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್, ಉಪಾಧ್ಯಕ್ಷ ವಿಲ್ಸನ್ ರೊಡ್ರಿಗಸ್, ಶಿರ್ವ ಪಂಚಾಯಿತಿ ಕಾರ್ಯದರ್ಶಿ ಚಂದ್ರಮಣಿ, ಕುರ್ಕಾಲು ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಎ.ಪೂಜಾರಿ, ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಮಹಿಳಾ ನಾಯಕಿ ಗೀತಾ ವಾಗ್ಲೆ ಬಂಟಕಲ್ಲು, ಅಶೋಕ್ ಕುಮಾರ್ ಕೊಡವೂರು ಇದ್ದರು. ಆಶಿಶ್ ಸುವರ್ಣ ನಿರೂಪಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪದ್ಮನಾಭ ನಾಯಕ್ ವಂದಿಸಿದರು.