ಶಿರ್ವ: ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ವತಿಯಿಂದ ಕ್ಯಾನ್ವಾ ಮಾಸ್ಟರ್ ಕ್ಲಾಸ್ ಕಾರ್ಯಾಗಾರ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಗಣಕಯಂತ್ರ ವಿಭಾಗದ ಮುಖ್ಯಸ್ಥ ಸದಾನಂದ್ ಎಲ್ ಮಾತನಾಡಿ, ಈ ಕಾರ್ಯಾಗಾರದ ಮುಖ್ಯ ಉದ್ದೇಶ ವಿದ್ಯಾರ್ಥಿಗಳ ಸೃಜನಶೀಲತೆ, ಡಿಜಿಟಲ್ ವಿನ್ಯಾಸ ಹಾಗೂ ಕಂಟೆಂಟ್ ಕ್ರೀಯೇಷನ್, ಗ್ರಾಫಿಕ್ ಡಿಸೈನಿಂಗ್, ಡಿಜಿಟಲ್ ಮಾರ್ಕೆಟಿಂಗ್ ಮುಂತಾದ ಕ್ಷೇತ್ರಗಳಲ್ಲಿ ಅರಿವು ಮೂಡಿಸುವುದಾಗಿದೆ ಎಂದರು.

ಈ ಕಾರ್ಯಾಗಾರವನ್ನು ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿಗಳಾದ ಸಂಜಿತ್ ಶೆಟ್ಟಿ, ಸಿ ವಿಘ್ನೇಶ್ ಕುಮಾರ್ ಮತ್ತು ದೀಪಕ್ ಶೆಟ್ಟಿ ಅವರು ನಡೆಸಿಕೊಟ್ಟರು.

ಕಾರ್ಯಾಗಾರದಲ್ಲಿ ಕ್ಯಾನ್ವಾದ ಮೂಲಭೂತ ಅಂಶಗಳು, ವೃತ್ತಿಪರ ಪೋಸ್ಟರ್ಗಳು, ವಿಡಿಯೊ ವಿನ್ಯಾಸ ಹಾಗೂ ಕ್ಯಾನ್ವಾದಲ್ಲಿನಕೃತಕ ಬುದ್ಧಿಮತ್ತೆ ಆಧಾರಿತ ವಿನ್ಯಾಸ ಸಾಧನಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಾಗಾರದಲ್ಲಿ ಪೋಸ್ಟರ್ ತಯಾರಿಸುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಂಸ್ಥೆಯ ಪ್ರಾಂಶುಪಾಲ ನಾಗರಾಜ್ ಭಟ್ ಬಹುಮಾನ, ಪ್ರಮಾಣಪತ್ರವನ್ನು ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-1801605062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.