ಶಿರ್ವ: ‘ಸರ್ಕಾರದ ಕಾರ್ಯಕ್ರಮ, ದಾನಿಗಳು ಮತ್ತು ಸಂಘ ಸಂಸ್ಥೆಗಳ ನೆರವು ಹಿಂದಿಗಿಂತಲೂ ಇಂದು ಸಕಾಲದಲ್ಲಿ ದೊರೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಬಡತನ ಅಡ್ಡಿಯಾಗುವುದಿಲ್ಲ’ ಎಂದು ನಿವೃತ್ತ ಉಪನ್ಯಾಸಕ ದಯಾನಂದ ಡಿ. ಕಿದಿಯೂರು ಹೇಳಿದರು.

ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಹಿಂದೂ ಶಾಲಾ ಸಭಾಂಗಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಯುಎಫ್ಸಿ ಪುಸ್ತಕ ಭಂಡಾರದಿಂದ ಪಠ್ಯ ಪುಸ್ತಕ ವಿತರಿಸಿ ಅವರು ಮಾತನಾಡಿದರು.

ಮಕ್ಕಳು ಮೊಬೈಲ್ನಿಂದ ಹೊರ ಬಂದು ಓದಿನತ್ತ ಗಮನ ಹರಿಸಬೇಕು. ಅಂಕ ಗಳಿಕೆಯ ಧಾವಂತಕ್ಕೆ ಬೀಳದೆ ಮಾನವೀಯತೆ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆ ಮಾನವೀಯತೆಯನ್ನು ಬೆಳೆಸಿಕೊಂಡಾಗ ಮಾತ್ರ ನಾವು ಕಲಿತ ಶಿಕ್ಷಣಕ್ಕೆ ಬೆಲೆ ಬರುತ್ತದೆ ಎಂದರು.

ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ನಮಗೆ ಜ್ಞಾನ ಹಂಚುವುದು ಶಿಕ್ಷಣ ಸಂಸ್ಥೆಗಳೇ ವಿನಾ ವಾಟ್ಸ್ಆ್ಯಪ್ ಅಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.

ಸಂಸ್ಥೆಯ ನಿರ್ದೇಶಕರಾದ ಚಂದ್ರಾವತಿ ಭಂಡಾರಿ, ಶರತ್ ಕುಮಾರ್ ಯು. ಪದ್ಮನಾಭ ಕಾಮತ್, ಕೋಶಾಧಿಕಾರಿ ಸತೀಶ್ ಡಿ. ಸಾಲ್ಯಾನ್ ವೇದಿಕೆಯಲ್ಲಿದ್ದರು. ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತ್ತುಲ್ಲ ವಂದಿಸಿದರು.

ಸುಮಾರು 100 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-572239367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.