ಶಿರ್ವ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ತಾಲ್ಲೂಕು ಘಟಕದ ವತಿಯಿಂದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗೆದ್ದ ಕ್ರೀಡಾಪಟುಗಳ ಅಭಿನಂದನಾ ಕಾರ್ಯಕ್ರಮ ಕಟಪಾಡಿ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ನಡೆಯಿತು.

ಕಟಪಾಡಿ ಎಸ್ವಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸತ್ಯೇಂದ್ರ ಪೈ ಕಾರ್ಯಕ್ರಮ ಉದ್ಘಾಟಿಸಿ, ಸರ್ಕಾರದ ನೀತಿಯಿಂದಾಗಿ ಅನುದಾನಿತ ಶಾಲೆಗಳನ್ನು ನಡೆಸುವುದೇ ಕಷ್ಟಕರವಾಗಿದೆ. ಶಿಕ್ಷಕರ ಕೊರತೆಯಿದೆ. ಆಡಳಿತ ಮಂಡಳಿ, ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಶಾಲೆ ಉಳಿಸುವ ಕಾರ್ಯ ನಡೆಯುತ್ತಿದೆ ಎಂದರು.

ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ ಅಧ್ಯಕ್ಷತೆಯನ್ನು ವಹಿಸಿದ್ದರು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿದರು. ಉದ್ಯಮಿ ಯೋಗೀಶ್ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಭಾ ಬಿ.ಶೆಟ್ಟಿ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ, ಕಾಪು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ರಿತೇಶ್ ಶೆಟ್ಟಿ ಸೂಡ, ಎಸ್ವಿಎಸ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಶಾನುಭೋಗ್, ಸಂಘದ ಕಾರ್ಯದರ್ಶಿ ಪ್ರಸಾದ್ ಸುವರ್ಣ ಪಾಲ್ಗೊಂಡಿದ್ದರು.

ನಿವೃತ್ತರಾದ ಪ್ರವೀಣ್ ಕುಮಾರ್ ಕಡಿಯಾಳಿ ಹಾಗೂ ಕಮಲಾ ಬಾಯಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುದರ್ಶನ್ ನಾಯಕ್, ಕೆ.ಸತ್ಯೇಂದ್ರ ಪೈ, ಎಲ್ಲಮ್ಮ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನವೀನ್ ಶೆಟ್ಟಿ ನಿರೂಪಿಸಿದರು. ಸಂಘದ ಕಾರ್ಯದರ್ಶಿ ಶಿವನಗೌಡ ಹಿರೇಗೌಡರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.