ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರ್ವ: ವೈಜ್ಞಾನಿಕ ಪದ್ಧತಿಯಲ್ಲಿ ಮಲ್ಲಿಗೆ ಕೃಷಿ– ಉಪನ್ಯಾಸ

Published : 18 ಸೆಪ್ಟೆಂಬರ್ 2024, 15:56 IST
Last Updated : 18 ಸೆಪ್ಟೆಂಬರ್ 2024, 15:56 IST
ಫಾಲೋ ಮಾಡಿ
Comments

ಶಿರ್ವ: ಗ್ರಾಮೀಣ ಹಳ್ಳಿ ಪ್ರದೇಶದ ಹಿಂದುಳಿದವರಿಗೆ ಜೀವನ ಪದ್ಧತಿ ಕಲಿಸಿಕೊಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಕ್ಷೇತ್ರ ಭದ್ರ ಬುನಾದಿ ಒದಗಿಸಿದೆ. ಎಲ್ಲಾ ಪೂರಕ ಮಾಹಿತಿ ಒದಗಿಸಿ ಕೊಡುತ್ತದೆ. ಸಮಾಜದಲ್ಲಿ ಎದ್ದು ನಿಲ್ಲುವಂತೆ ಮಾಡುವ ಸಾಮರ್ಥ್ಯವನ್ನು ಸಹಕಾರಿ ಕ್ಷೇತ್ರ ಹೊಂದಿದೆ ಎಂದು ಪುತ್ತೂರು ಸರಸ್ವತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು.

ಅವರು ಶಿರ್ವ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಮಹಿಳಾ ಕೌಶಲಾಭಿವೃದ್ಧಿ ಯೋಜನೆಯಡಿ ‘ವೈಜ್ಞಾನಿಕ ಪದ್ಧತಿಯಲ್ಲಿ ಮನೆಯಲ್ಲಿ ಮಲ್ಲಿಗೆ ಕೃಷಿ’ ಕುರಿತು ಸಮಗ್ರ ಮಾಹಿತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಂಟಕಲ್ಲು ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಅವರು, ಮಲ್ಲಿಗೆ ಬೆಳೆಗಾರರು ಸಾಮಾನ್ಯವಾಗಿ ಮಾಡುವ ತಪ್ಪುಗಳಿಂದ ಇಳುವರಿ ಕಡಿಮೆಯಾಗಿ ನಷ್ಟ ಅನುಭವಿಸುತ್ತಿರುವ ಸನ್ನಿವೇಶವನ್ನು ವಿವರಿಸಿದರು. ಆಧುನಿಕ ವೈಜ್ಞಾನಿಕ ಪದ್ಧತಿಯಲ್ಲಿ ಮಲ್ಲಿಗೆ ಕೃಷಿ ಮಾಡಿ ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಕೃಷಿಕರೊಂದಿಗೆ ಸಂವಾದ ನಡೆಸಿದರು.

ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ. ಭಾಸ್ಕರ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲ್ಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ, ವಿಮಾ ಸಲಹೆಗಾರರಾದ ನೋರ್ಬರ್ಟ್ ಮಚಾದೊ ಶುಭ ಹಾರೈಸಿದರು. ಶಿರ್ವ ಶಾಖಾ ಪ್ರಬಂಧಕಿ ಸುಧಾ ಪ್ರಭು ಸ್ವಾಗತಿಸಿದರು. ಬಿಪಿನ್‌ಚಂದ್ರ ವಾಗ್ಲೆ ಪುತ್ತೂರು ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT