ಶಿರ್ವ: ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಕುತ್ಯಾರು ನವೀನ್ ಶೆಟ್ಟಿ ಅವರನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕುತ್ಯಾರಿನಲ್ಲಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ‘ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ 159ನೇ ಕುತ್ಯಾರು ಬೂತ್ನ ಸಾಮಾನ್ಯ ಕಾರ್ಯಕರ್ತರಾಗಿದ್ದ ನವೀನ್ ಅವರು, ಗ್ರಾ.ಪಂ. ಅಧ್ಯಕ್ಷರಾಗಿ, ತಾಲ್ಲೂಕು, ಕಾಪು ಬ್ಲಾಕ್ ಮಟ್ಟದಲ್ಲಿ ಪದಾಧಿಕಾರಿಯಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೂರು ಅವಧಿಗೆ ಕರ್ತವ್ಯ ನಿರ್ವಹಿಸಿದ್ದಾರೆ’ ಎಂದರು.

ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ‘ಬೂತ್ ಗೆದ್ದರೆ ದೇಶ ಗೆದ್ದೀತು’ ಇದು ಮೋದಿಯವರ ಮಾತು, ನನಸಾಗಿಸುವುದೇ ನಮ್ಮ ಉದ್ದೇಶ. ಡಾ.ಆಚಾರ್ಯ, ಕೊಡ್ಗಿ ಅವರು ಮೊದಲ ಹಂತದ ನಾಯಕರು. ನಾವು ಎರಡನೇ ಹಂತದವರು, ಮೂರನೇ ಹಂತದ ನಾಯಕರನ್ನು ತಯಾರು ಮಾಡುವುದೇ ನಮ್ಮ ಗುರಿ. ಜಿಲ್ಲೆಯಾದ್ಯಂತ ಬೂತ್ಗೆ ಶಕ್ತಿ ಕೊಡುವ ಕಾರ್ಯ ನಡೆಯಲಿದೆ’ ಎಂದರು.

ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಜನಾರ್ದನ ಆಚಾರ್ಯ, ಗಣ್ಯರಾದ ಜಿನೇಶ್ ಬಲ್ಲಾಳ್, ಬೂತ್ ಕಾರ್ಯದರ್ಶಿ ಪೂರ್ಣಚಂದ್ರ, ಹಿರಿಯ ಕಾರ್ಯಕರ್ತ ಸತೀಶ್ ಕುತ್ಯಾರು ಇದ್ದರು.

ಬೂತ್ ಅಧ್ಯಕ್ಷ ಧೀರಜ್ ಕುಲಾಲ್ ಸ್ವಾಗತಿಸಿದರು. ಕುತ್ಯಾರು ಪ್ರಸಾದ್ ಶೆಟ್ಟಿ ನಿರೂಪಿಸಿದರು. ಗ್ರಾಮ ಪಂಚಾಯಿತಿ ಸದಸ್ಯೆ ಲತಾ ಆಚಾರ್ಯ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.