ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರ್ವ ಮಹಿಳಾ ಮಂಡಲದ ವಜ್ರಮಹೋತ್ಸವ ಸಮಾರೋಪ 4ರಂದು

Last Updated 2 ಡಿಸೆಂಬರ್ 2022, 4:53 IST
ಅಕ್ಷರ ಗಾತ್ರ

ಶಿರ್ವ: ಇಲ್ಲಿನ ಮಹಿಳಾ ಮಂಡಲದ ವಜ್ರಮಹೋತ್ಸವ ಸಮಾರೋಪ ಸಮಾರಂಭ ಇದೇ 4ರಂದು ಶಿರ್ವ ಮಹಿಳಾ ಸೌಧದಲ್ಲಿ ನಡೆಯಲಿದ್ದು ಬೆಳಿಗ್ಗೆ 9 ಗಂಟೆಯಿಂದ ಮಹಿಳೆಯರಿಗಾಗಿ ಪ್ರತಿಭಾ ಸ್ಫರ್ಧೆ ಜರುಗಲಿದೆ. ಎಲ್ಲೂರು ವಿಶ್ವೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಅರಸ್ ಉದ್ಘಾಟಿಸುವರು.

ಸಂಜೆ 4ರಿಂದ ನಡೆಯುವ ಸಮಾರೋಪ ಸಮಾರಂಭವನ್ನು ಒಡಿಯೂರು ಗುರುದೇವದತ್ತ ಸಂಸ್ಥಾನದ ಸಾಧ್ವಿ ಮಾತಾನಂದಮಯಿ ಉದ್ಘಾಟಿಸುವರು. ಮಹಿಳಾ ಮಂಡಲದ ಅಧ್ಯಕ್ಷೆ ಗೀತಾ ವಾಗ್ಲೆ ಅಧ್ಯಕ್ಷತೆ ವಹಿಸುವರು. ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಬಿ.ಸರಳಾ ಕಾಂಚನ್, ಉಡುಪಿ ತಾಲ್ಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷ ರತನ್ ಕುಮಾರ್ ಶೆಟ್ಟಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಅಂಚನ್, ಶಿರ್ವ ಮಹಿಳಾ ಮಂಡಲದ ಗೌರವ ಅಧ್ಯಕ್ಷೆ ಬಬಿತಾ ಅರಸ್ ಪಾಲ್ಗೊಳ್ಳುವರು.

‘ಬದುಕಿನ ಮೌಲ್ಯಗಳು ಮತ್ತು ಹಾಸ್ಯ’ ವಿಷಯದಲ್ಲಿ ಕಲಾವಿದೆ ಸಂಧ್ಯಾ ಶೆಣೈ ಉಡುಪಿ ದಿಕ್ಸೂಚಿ ಭಾಷಣ ಮಾಡುವರು. ವಿವಿಧ ಸ್ಫರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ದಾನಿಗಳಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಮಹಿಳಾ ಮಂಡಲದ ಕಾರ್ಯದರ್ಶಿ ಡಾ.ಸ್ಫೂರ್ತಿ ಪಿ.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT