ಗುರುವಾರ , ಮಾರ್ಚ್ 30, 2023
24 °C

ಡಿಕೆಶಿಗೆ ಕಡ್ಸಲೆ ಉಡುಗೊರೆ: ಜಾಲತಾಣದಲ್ಲಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್‌ ಮುಖಂಡರೊಬ್ಬರು ದೈವಾರಾಧನೆಗೆ ಬಳಸುವ ಕಡ್ಸಲೆಯನ್ನು ಉಡುಗೊರೆ ನೀಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ.

ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ‘ತುಳುನಾಡಿನ ದೈವಾರಾಧನೆ ಪದ್ಧತಿಗೆ ಕಾಂಗ್ರೆಸ್‌ನಿಂದ ಅವಮಾನವಾಗಿದೆ. ದೈವದ ಕಡ್ಸಲೆಗೆ ತನ್ನದೇ ಶಕ್ತಿ ಹಾಗೂ ನಂಬಿಕೆ ಇದೆ. ಇದನ್ನು ರಾಜಕೀಯಕ್ಕೆ ಬಳಸಿರುವುದು ಅಕ್ಷಮ್ಯ ಅಪರಾಧ. ತುಳುನಾಡಿ ಸಮಸ್ತರಲ್ಲಿ ಕಾಂಗ್ರೆಸ್‌ ಕ್ಷಮೆಯಾಚಿಸಬೇಕು’ ಎಂದು ಟ್ವಿಟ್ಟರ್‌ನಲ್ಲಿ ಆಗ್ರಹಿಸಿದ್ದಾರೆ.

ಸುನೀಲ್ ಕುಮಾರ್ ಅವರ ಟ್ವೀಟ್‌ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು