ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಣ್ಣಾಮಲೈ ರೋಡ್ ಶೋ ನಾಳೆ

Published 2 ಮೇ 2024, 13:57 IST
Last Updated 2 ಮೇ 2024, 13:57 IST
ಅಕ್ಷರ ಗಾತ್ರ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ರೋಡ್ ಶೋ ಮೇ.3ರಂದು ನಡೆಯಲಿದೆ. ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರೋಡ್‌ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಹಾಗೂ ಶಾಸಕ ಗುರುರಾಜ ಗಂಟಿಹೊಳೆ ಅವರ ಉಪಸ್ಥಿತಿಯಲ್ಲಿ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಕೊಲ್ಲೂರಿನಲ್ಲಿ ರೋಡ್ ಶೋಗೆ ಚಾಲನೆ ನೀಡಲಿದ್ದಾರೆ. ಕೊಲ್ಲೂರಿಂದ ವಂಡ್ಸೆ, ನೇರಳಕಟ್ಟೆ, ತಲ್ಲೂರು ವರೆಗೆ ರೋಡ್‌ಶೋ ನಡೆಯಲಿದೆ.

ಮಧ್ಯಾಹ್ನ ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೋಡ್‌ ಶೋ ಹಾಗೂ ಬೈಕ್ ರ‍್ಯಾಲಿ ನಡೆಯಲಿದೆ. ನಂತರ ಉಪ್ಪುಂದ ತಾರಪತಿಯಿಂದ ಕರ್ಕಿಕಳಿ ವರೆಗೆ ಸಾಗುವ ರೋಡ್ ಶೋ ಕಿರಿಮಂಜೇಶ್ವರ, ನಾವುಂದ, ಮರವಂತೆ, ತ್ರಾಸಿ, ಗುಜ್ಜಾಡಿ ಮಾರ್ಗವಾಗಿ ತೆರಳಿ ಗಂಗೊಳ್ಳಿಯಲ್ಲಿ ಮುಕ್ತಾಯವಾಗಲಿದೆ. ಅಣ್ಣಾಮಲೈ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT