ಉಡುಪಿ: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ, ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹನ್ನೆರಡನೇ ಶತಮಾನದ ಪ್ರಮುಖ ಪಂಚ ಶಿವಶರಣರಲ್ಲಿ ಒಬ್ಬರಾದ ಶಿವಯೋಗಿ ಸಿದ್ಧರಾಮ ಅವರು ಮಾನವರೆಲ್ಲರೂ ಸಮಾನರು ಎಂಬ ಪರಿಕಲ್ಪನೆಯಲ್ಲಿ ವಚನ ರಚಿಸುವುದರೊಂದಿಗೆ ಸಮುದಾಯದ ನಾಯಕರಾದರು ಎಂದರು.

ವಚನ ಸಾಹಿತ್ಯ ಚಳುವಳಿಯ ಸಂದರ್ಭದಲ್ಲಿ ಉಂಟಾದ ಸಾಮಾಜಿಕ ಕ್ರಾಂತಿಯಿಂದ ಶಿವಶರಣರು ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸವನ್ನು ತಮ್ಮ ವಚನಗಳ ಮೂಲಕ ಮಾಡಿದರು ಎಂದು ಹೇಳಿದರು.

ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ರಾಜ್ ಕುಮಾರ್ ಪೆರ್ಣಂಕಿಲ ಮಾತನಾಡಿ, ಶಿವಯೋಗಿ ಸಿದ್ಧರಾಮ ಅವರನ್ನು ಭೋವಿ ಜನಾಂಗದವರು ತಮ್ಮ ಕುಲಗುರುಗಳಾಗಿ ಸ್ವೀಕರಿಸಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಸಮಾಜದ ಪ್ರತಿಯೊಬ್ಬರೂ ನಡೆಯಬೇಕು ಎಂದರು.

ಉಡುಪಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಜಗದೀಶ ಪರ್ಕಳ ಉಪನ್ಯಾಸ ನೀಡಿದರು. ನಿವೃತ್ತ ಸೈನಿಕ ವಿಶ್ವನಾಥ ಪೆರ್ಡೂರು ಅವರನ್ನು ಸನ್ಮಾನಿಸಲಾಯಿತು.

ಸಮುದಾಯದ ವ್ಯವಸ್ಥಾಪಕ ಶಂಕರ್, ಭೋವಿ ಸಮುದಾಯದ ಪದಾಧಿಕಾರಿಗಳು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಉಪನ್ಯಾಸಕ ರಾಮಾಂಜಿ ನಿರೂಪಿಸಿದರು. ವರ್ಷಾ ಬಿ. ಕೋಟ್ಯಾನ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.