ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಆರ್‌ಎಸ್ ಅಣೆಕಟ್ಟೆ ಪರಿಸ್ಥಿತಿಯ ಬಗ್ಗೆ ಶ್ವೇತ ಪತ್ರ ಹೊರಡಿಸಿ: ಶೋಭಾ ಕರಂದ್ಲಾಜೆ

Published : 2 ಸೆಪ್ಟೆಂಬರ್ 2023, 9:15 IST
Last Updated : 2 ಸೆಪ್ಟೆಂಬರ್ 2023, 9:15 IST
ಫಾಲೋ ಮಾಡಿ
Comments

ಉಡುಪಿ: ಕೆಆರ್‌ಎಸ್‌ ಅಣೆಕಟ್ಟೆ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತ ಪತ್ರ ಹೊರಡಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಶುಕ್ರವಾರ ಮಾಧ್ಯಮ ಪ್ರತಿಗಳ ಜತೆ ಮಾತನಾಡಿ, ಈ ವರ್ಷ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಅಣೆಕಟ್ಟುಗಳು ಭರ್ತಿಯಾಗಿಲ್ಲ. ಕಾವೇರಿ ನದಿಯು ಬೆಂಗಳೂರು, ಕೋಲಾರ, ಮೈಸೂರು, ಮಂಡ್ಯ, ತುಮಕೂರಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟರೆ ಬೇಸಗೆಯಲ್ಲಿ ನೀರಿನ ಕೊರತೆ ಉಂಟಾಗಲಿದೆ ಎಂದರು.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತಮಿಳುನಾಡು ಸರ್ಕಾರದ ಮನವೊಲಿಸಬೇಕು. ಕಳೆದ ಬಾರಿಯೂ ನಿಗದಿತ ಪ್ರಮಾಣಕ್ಕಿಂತ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡಲಾಗಿದೆ. ಈ ವರ್ಷ ‘ಇಂಡಿಯಾ ಟೀಂ’ ಖುಷಿ ಪಡಿಸಲು ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಟೀಕಿಸಿದರು.

ಕೆಆರ್‌ಎಸ್‌ನಲ್ಲಿ ಹೆಚ್ಚುವರಿ ನೀರಿದ್ದರೆ ತಮಿಳುನಾಡಿಗೆ ಬಿಡಬಹುದು. ಆದರೆ, ರಾಜ್ಯಕ್ಕೆ ನೀರಿಲ್ಲದಾಗ ತಮಿಳುನಾಡಿಗೆ ಹರಿಸುವುದು ಹೇಗೆ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT