ಶುಕ್ರವಾರ, ಏಪ್ರಿಲ್ 3, 2020
19 °C

ಕ್ಯಾಸಿನೊ ತೆರೆಯುವ ನಿರ್ಧಾರ ಸರಿಯಲ್ಲ: ಸಂಸದೆ ಶೋಭಾ ಕರಂದ್ಲಾಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಉಡುಪಿ: ರಾಜ್ಯದಲ್ಲಿ ಕ್ಯಾಸಿನೊ ಕೇಂದ್ರಗಳನ್ನು ತೆರೆಯುವುದು ಬಿಜೆಪಿ ವಿಚಾರಧಾರೆಗಳಿಗೆ ವಿರುದ್ಧವಾಗಿದೆ. ಸಮಾಜವನ್ನು ದಾರಿತಪ್ಪಿಸುವ ಕೆಲಸಗಳು ಸರಿಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕ್ಯಾಸಿನೋ ಕೇಂದ್ರಗಳನ್ನು ತೆರೆಯುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದರು.

ಪಾಕಿಸ್ತಾನದ ವಿಚಾರವಾಗಿ ಭಾರತಕ್ಕೆ ಅಮೆರಿಕಾದ ಬೆಂಬಲ ಬೇಕಿತ್ತು. ಟ್ರಂಪ್ ಭಾರತದ ನೆಲದಲ್ಲಿ ನಿಂತು ಭಯೋತ್ಪಾದನೆ ವಿರುದ್ಧ ಮಾತನಾಡಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಪಾಕಿಸ್ತಾನಕ್ಕೆ ಕಟುವಾದ ಸಂದೇಶ ರವಾನೆಯಾದಂತಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಯಡಿಯೂರಪ್ಪ ಅವರಿಗೆ 77 ವರ್ಷ ತುಂಬಿದೆ. ಇಳಿ ವಯಸ್ಸಿನಲ್ಲೂ ರಾಜ್ಯದಾದ್ಯಂತ ನಿರಂತರ ಪ್ರವಾಸ ಮಾಡುತ್ತಿರುವ ಮುಖ್ಯಮಂತ್ರಿಗೆ ಶುಭವಾಗಲಿ. ರಾಜ್ಯದ ಜನರ, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮತ್ತಷ್ಟು ಮಾಡಲಿ ಎಂದು ಶೋಭಾ ಕರಂದ್ಲಾಜೆ ಹಾರೈಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು