ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕರಾವಳಿ ಸಮಸ್ಯೆ ಬಗೆಹರಿಸುವ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾಪು (ಪಡುಬಿದ್ರಿ): ಕೇಂದ್ರ ಸರ್ಕಾರದ ರಾಜ್ಯ ಸಚಿವೆಯಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಶೋಭಾ ಕರಂದ್ಲಾಜೆ ಅವರನ್ನು ಸೋಮವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ ಅಭಿನಂದಿಸಿದರು.

ದೆಹಲಿ ಕಚೇರಿಯಲ್ಲಿ ಅವರನ್ನು ಭೇಟಿಯಾದ ಸುರೇಶ್ ಶೆಟ್ಟಿ, ಉಡುಪಿ ಹಾಗೂ ದಕ್ಷಿಣ ಜಿಲ್ಲೆಗಳ ಜ್ವಲಂತ ಸಮಸ್ಯೆಗಳನ್ನು ವಿವರಿಸಿದರು. ಕರಾವಳಿ ಜಿಲ್ಲೆಗಳ ಅಭಿವೃದ್ಧಿಯ ಬಗ್ಗೆ ಮನವಿ ಮಾಡಿದರು. ಗುರ್ಮೆ ಮನವಿ ಸ್ಪಂದಿಸಿದ ಸಚಿವೆ ಕರಂದ್ಲಾಜೆ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಮಾಜದ ಪ್ರಮುಖರ ಅಭಿಪ್ರಾಯ ಪಡೆದು ಕಾರ್ಯ ಪ್ರವೃತ್ತರಾಗುವುದಾಗಿ ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು