ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಅಹಂಕಾರಕ್ಕೆ ಮತದಾರರು ಮದ್ದು ನೀಡಲಿದ್ದಾರೆ: ಶೋಭಾ ಕರಂದ್ಲಾಜೆ

Published 3 ಜೂನ್ 2023, 12:53 IST
Last Updated 3 ಜೂನ್ 2023, 12:53 IST
ಅಕ್ಷರ ಗಾತ್ರ

ಉಡುಪಿ: 'ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಆಹ್ವಾನ ನೀಡಿರುವ ಕಾಂಗ್ರೆಸ್‌ ಪಕ್ಷ ಅಹಂಕಾರ ಪ್ರದರ್ಶಿಸಿದ್ದು ಮತದಾರರು ಅಹಂಕಾರಕ್ಕೆ ಮದ್ದು ನೀಡಲಿದ್ದಾರೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಚಿತ ಕೊಡುಗೆಗಳನ್ನು ನೀಡಿರುವ ಆಂಧ್ರಪ್ರದೇಶ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿ ಮುಳುಗುವ ಸ್ಥಿತಿಯಲ್ಲಿದೆ. ಸರ್ಕಾರಿ ನೌಕರರಿಗೆ ವೇತನ ಕೊಡಲೂ ಖಜಾನೆಯಲ್ಲಿ ಹಣವಿಲ್ಲ. ಆಂಧ್ರದ ಸ್ಥಿತಿಗೆ ಕರ್ನಾಟಕ ತಲುಪಬಾರದು. ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣಕಾಸಿನ ಮೂಲವನ್ನು ಕಾಂಗ್ರೆಸ್‌ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶೋಭಾ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ನ ಗ್ಯಾರಂಟಿಗಳು ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಮತದಾರರು ವಿದ್ಯಾವಂತರು, ಬುದ್ದಿವಂತರು ಹಾಗೂ ದೇಶಭಕ್ತರಾಗಿದ್ದು ಭಾರತಕ್ಕೆ ವಿಶ್ವಮನ್ನಣೆ ತಂದುಕೊಟ್ಟಿರುವ ಪ್ರಧಾನಿ ಮೋದಿ ನಾಯಕತ್ವಕ್ಕೆ ಮತ ಹಾಕಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT