ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟಪಾಡಿಯಲ್ಲಿ ₹ 22.72 ಕೋಟಿ ವೆಚ್ಚದಲ್ಲಿ ಓವರ್‌ಪಾಸ್‌

Last Updated 14 ಜೂನ್ 2021, 17:25 IST
ಅಕ್ಷರ ಗಾತ್ರ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ₹ 22.72 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಪ್ರದೇಶದಲ್ಲಿ ಅಂಡರ್ ಪಾಸ್‌ ನಿರ್ಮಾಣಕ್ಕೆ ಜನರು ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಿದ್ದರು. ಹಲವು ಬಾರಿ ಕೇಂದ್ರ ಸಾರಿಗೆ ಸಚಿವರನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿತ್ತು. ‌

ಅದರಂತೆ ಕೇಂದ್ರ ಸರ್ಕಾರ ಕಟಪಾಡಿಯಲ್ಲಿ ಅಂಡರ್ ಪಾಸಿನ ಬದಲು, ಓವರ್ ಪಾಸ್ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಿದೆ. ಇದರಿಂದ ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ, ಬಂಟಕಲ್, ಶಿರ್ವ, ಮಟ್ಟು, ಬೆಳ್ಮಣ್ ಪ್ರದೇಶದ ನಿವಾಸಿಗಳಿಗೆ ಪ್ರಯೋಜನವಾಗಿದೆ ಎಂದು ಸಂಸದರು ತಿಳಿಸಿದ್ದಾರೆ.‌

ವಿಸ್ತೃತ ಯೋಜನಾ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಿದ್ಧಪಡಿಸುತ್ತಿದ್ದು, ಶೀಘ್ರ ಯೋಜನೆ ಸಂಪೂರ್ಣ ವಿವರಗಳು ಲಭ್ಯವಾಗಲಿವೆ. ಜನರ ಬಹುದಿನಗಳ ಬೇಡಿಕೆಯನ್ನು ಈಡೇಸಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT