ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಷ್ಕರ್ ಪರ ಗೋಡೆಬರಹ; ಮಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಿ: ಸಂಸದೆ ಶೋಭಾ ಕರಂದ್ಲಾಜೆ

Last Updated 27 ನವೆಂಬರ್ 2020, 13:26 IST
ಅಕ್ಷರ ಗಾತ್ರ

ಉಡುಪಿ: ಮಂಗಳೂರಿನಲ್ಲಿ ಲಷ್ಕರ್ ಉಗ್ರ ಸಂಘಟನೆ ಪರವಾಗಿ ಬರೆದಿರುವ ಗೋಡೆ ಬರಹ ಕಾಶ್ಮೀರ ಅಥವಾ ಪಾಕಿಸ್ತಾನದ ಉಗ್ರರು ಮಂಗಳೂರುವರೆಗೆ ಬಂದಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದುಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಉಡುಪಿಯಲ್ಲಿ ಮಾತನಾಡಿದ ಅವರು, ಗೋಡೆ ಬಹರ ಬರೆದವರು ಯಾರು ಎಂಬ ಬಗ್ಗೆ ತನಿಖೆಯಾಗಬೇಕು. ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಶೋಭಾ ಒತ್ತಾಯಿಸಿದರು.

ಮುಸ್ಲಿಂ ಯುವಕ ಕೇರಳದಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿ ಅನಾಥವಾಗಿಸಿರುವ ಸುದ್ದಿ ವರದಿಯಾಗಿದ್ದು, ಸಮಗ್ರ ತನಿಖೆಯಾಗಬೇಕು. ಲವ್‌ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರ ಮೇಲೆ ನಡೆಯುತ್ತಿರುವ ಅನ್ಯಾಯ ನಿಲ್ಲಲು ರಾಜ್ಯದಲ್ಲಿ ಲವ್ ಜಿಹಾದ್‌ ವಿರುದ್ಧದ ಕಾನೂನು ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ಲವ್ ಜಿಹಾದ್‌ ವಿರುದ್ಧ ಕ್ರಮ:

ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಕುರಿತು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ಕೂಡ ಒಪ್ಪಿಗೆ ಕೊಟ್ಟಿದ್ದಾರೆ. ಸರ್ಕಾರ ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹೇಳಿದರು.

ಮಂಗಳೂರಿನಲ್ಲಿ ಲಷ್ಕರ್ ಪರವಾಗಿ ರಾಷ್ಟ್ರವಿರೋಧಿ ಬರಹ ಬರೆದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕಟೀಲ್ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT