ಉಡುಪಿ: ಶಿವಮೊಗ್ಗದಲ್ಲಿ ನಡೆದ ಹರ್ಷನ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಹಿಂದೆಯೂ ಹಲವು ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಬೆಂಗಳೂರಿನ ರುದ್ರೇಶ್ ಕೊಲೆ ಪ್ರಕರಣದಲ್ಲಿ ಪಿಎಫ್ಐ ಹಾಗೂ ಎಸ್ಡಿಪಿಐ ಕೈವಾಡ ಸಾಬೀತಾಗಿದೆ. ಹರ್ಷನ ಕೊಲೆಯ ಹಿಂದೆಯೂ ದೊಡ್ಡ ಷಡ್ಯಂತ್ರವಿದ್ದು, ಬಯಲಾಗಬೇಕು. ಆತನ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ಎನ್ಐಎ ತನಿಖೆಗೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಪತ್ರ ಬರೆಯುವುದಾಗಿ ತಿಳಿಸಿರುವ ಶೋಭಾ ಕರಂದ್ಲಾಜೆ, ಮೃತ ಹರ್ಷನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.