ಕಾರ್ಕಳ: ಇಲ್ಲಿನ ಬಸ್ ನಿಲ್ದಾಣ ಸಮೀಪದ ಕೆನರಾ ಬ್ಯಾಂಕ್ ಶಾಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯುತ್ ಪರಿಕರಗಳು, ಸಣ್ಣಪುಟ್ಟ ದಾಖಲೆಗಳು ಅಗ್ನಿಗಾಹುತಿಯಾದ ಘಟನೆ ಗುರುವಾರ ಸಮಭವಿಸಿದೆ.
ಏಕಾಏಕಿ ಬ್ಯಾಂಕ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು ಬಳಿಕ ಬೆಂಕಿ ವ್ಯಾಪಿಸಲು ಆರಂಭವಾಗಿದೆ. ಬ್ಯಾಂಕ್ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ಯಾಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದಂತಾಗಿದೆ.
ಯಾವುದೇ ಅಗತ್ಯ ದಾಖಲೆಗಳು ಹಾಗೂ ಸೊತ್ತುಗಳು ಹಾನಿಯಾಗಿಲ್ಲ ಗ್ರಾಹಕರು ಭಯ ಪಡುವ ಅವಶ್ಯಕತೆ ಇಲ್ಲ ಎಂದು ಬ್ಯಾಂಕ್‌ನ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.