ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮರ್ಪಣೆ

ಶಿರ್ವ: ಕಟಪಾಡಿಯಲ್ಲಿ ನಡೆದ ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ಕೃತಜ್ಞತಾರ್ಪಣೆ ಸಮಾರಂಭ ಈಚೆಗೆ ನಡೆಯಿತು. ಸಮ್ಮೇಳನದ ಅಧ್ಯಕ್ಷ ಕೆ.ಸತ್ಯೇಂದ್ರ ಪೈ ಮಾತನಾಡಿದರು.
ಕಸಾಪ ಕಾಪು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಾಂಶುಪಾಲ ದಯಾನಂದ ಪೈ ಅಧ್ಯಕ್ಷತೆಯಲ್ಲಿ ನಡೆದ ಸ್ವಾಗತ ಸಮಿತಿಯ ಕಾರ್ಯ ಅನುಕರಣೀಯ ಎಂದರು.
ದಯಾನಂದ ಪೈ, ಕಾರ್ಯದರ್ಶಿ ಭಾಸ್ಕರ ಕಾಮತ್, ಫ್ರೌಢ ಶಾಲಾ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ತಂತ್ರಿ, ಆಡಳಿತ ಮಂಡಳಿ ಸದಸ್ಯ ಗಣೇಶ್ ಕಿಣಿ, ಕಸಾಪ ತಾಲ್ಲೂಕು ಘಟಕದ ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು, ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ಕಸಾಪ ಸಮಿತಿ ಸದಸ್ಯೆ ಗ್ರೆಟ್ಟಾ ಮೊರಾಸ್ ಪಲಿಮಾರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿ ಪ್ರಭಾ ಬಿ.ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಕಿರಣ್‍ಕುಮಾರ್ ಶೆಟ್ಟಿ, ದಿಲೀಪ್ ಕುಮಾರ್ ಬನ್ಸೋಡೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.