ಸೋಮವಾರ, ಅಕ್ಟೋಬರ್ 3, 2022
20 °C

ಕೌಶಲಾಭಿವೃದ್ಧಿ ಈಗ ಅನಿವಾರ್ಯ: ವಿದ್ಯಾಧರ್ ಹೆಗ್ಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಕಳ: ‘ವಿದ್ಯಾರ್ಥಿಗಳು ಕೌಶಲ ಹೆಚ್ಚಿಸಿಕೊಳ್ಳಬೇಕು’ ಎಂದು ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ವಿದ್ಯಾಧರ್ ಹೆಗ್ಡೆ ಹೇಳಿದರು.

ಇಲ್ಲಿನ ಭುವನೇಂದ್ರ ಕಾಲೇಜಿನ ಬಿ. ಮಂಜುನಾಥ್ ಪೈ ಸ್ಮಾರಕ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಂತರ ಕಾಲೇಜು ಮಟ್ಟದ ಪ್ರಬಂಧ ಮಂಡನಾ ಸ್ಪರ್ಧೆ ‘ಪ್ರಾಡಿಜಿ–2022’ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದತ್ತಾತ್ರೆಯ ಮಾರ್ಪಳ್ಳಿ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಸಂಯೋಜಕಿ ಪೂಜಾ ಹಾಗೂ ರೇಷ್ಮಾ ಇದ್ದರು. ಸಂಯೋಜಕ ಉಪನ್ಯಾಸಕ ವಿಜಯಕುಮಾರ್ ಸ್ವಾಗತಿಸಿದರು. ಪ್ರತೀಕ್ಷಾ ಜೈನ್ ನಿರೂಪಿಸಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು