ಉಡುಪಿ: ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ನಗರದ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಶೇಖರ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಎರಡು ದಿನ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿಸುವುದಾಗಿ ವೈದ್ಯರು ತಿಳಿಸಿದ್ದಾರೆ.

ಜಿ.ರಾಜಶೇಖರ್ 2019ರಲ್ಲಿ ಆಕಸ್ಮಿಕವಾಗಿ ಬಿದ್ದು ತಲೆಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದರು. ಪರೀಕ್ಷೆಗೊಳಪಡಿಸಿದಾಗ ಅವರಿಗೆ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ ಎಂಬ ಪಾರ್ಕಿನ್‌ಸನ್ಸ್ ಕಾಯಿಲೆ ಇರುವುದು ದೃಢಪಟ್ಟಿತ್ತು.

ಅವರ ನೆನಪಿನ ಶಕ್ತಿ ಕುಂದುತ್ತಾ ಹೋಗಿ ಹೋರಾಟಗಳಲ್ಲಿ ಭಾಗವಹಿಸುವುದನ್ನು ನಿಲ್ಲಿಸಿದ್ದರು. ನಡೆಯಲು ಸಾಧ್ಯವಾಗದ ಹಾಗೂ ಆಹಾರವನ್ನು ನುಂಗಲಾರದ ಸ್ಥಿತಿಗೆ ತಲುಪಿದ್ದಾರೆ ಎಂದು ಪುತ್ರ ವಿಷ್ಣು ರಾಜಶೇಖರ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.