ಉಡುಪಿ: ಸಾಫ್ಟ್ವೇರ್ ಎಂಜಿನಿಯರ್ ಪ್ರಿಯದರ್ಶಿನಿ ಪಿ. ಅವರ ‘ಕೀಕಾ’ ಕೃತಿ ಲೋಕಾರ್ಪಣೆ ಸಮಾರಂಭವು ನಗರದ ಅಜ್ಜರಕಾಡು ಪುರಭವನದಲ್ಲಿ ಶುಕ್ರವಾರ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಾಸ್ಯ ಕವಿ ಶಾಂತರಾಜ ಐತಾಳ್, ಇಂದು ಹಿಮಾಲಯ ಕೂಡ ಮಲಿನಗೊಳ್ಳುತ್ತಿದೆ. ಹಿಮಾಲಯಕ್ಕೂ ಬೇಲಿ ಅಳವಡಿಸುವ ಪರಿಸ್ಥಿತಿ ಎದುರಾಗಬಹುದು. ಆದ್ದರಿಂದ ಹಿಮಾಲಯವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಬಹುತೇಕ ಪಕ್ಷಿಗಳು ವಿನಾಶದಂಚಿಗೆ ತಲುಪುತ್ತಿವೆ. ಈ ಎಲ್ಲ ಮಾಹಿತಿಗಳನ್ನು ಈ ಪುಸ್ತಕದಲ್ಲಿ ಲೇಖಕಿ ನೀಡಿದ್ದಾರೆ ಎಂದರು.

ಕೃತಿಯನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಬಿಡುಗಡೆಗೊಳಿಸಿದರು.

ಉಡುಪಿ ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಉದ್ಯಮಿ ಪುರುಷೋತ್ತಮ ಶೆಟ್ಟಿ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾರಂತ, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಮಹೇಶ್ ಶೆಟ್ಟಿ, ಉಡುಪಿ ಜಿ.ಶಂಕರ್ ಸರ್ಕಾರಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಂದ್ರ, ಲೇಖಕಿ ಪ್ರಿಯದರ್ಶಿನಿ, ಶರಣ್ಣಮ್ಮ ಪಿ. ಉಪಸ್ಥಿತರಿದ್ದರು. ಯೋಗೀಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.