ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಜನ್ಯಾ ಕೊಲೆ ಆರೋಪಿಗಳಿಗೆ ಉಗ್ರ ಶಿಕ್ಷೆ ಕೊಡಿ: ಹೋರಾಟ ಸಮಿತಿಯಿಂದ ಪ್ರತಿಭಟನೆ

Published 29 ಆಗಸ್ಟ್ 2023, 20:29 IST
Last Updated 29 ಆಗಸ್ಟ್ 2023, 20:29 IST
ಅಕ್ಷರ ಗಾತ್ರ

ಉಡುಪಿ: ಸೌಜನ್ಯಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ‘ಸೌಜನ್ಯಾ ಹೋರಾಟ ಸಮಿತಿ’ ವತಿಯಿಂದ ಮಂಗಳವಾರ ಇಲ್ಲಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಗೂ ಮುನ್ನ ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿದ ಹೋರಾಟ ಸಮಿತಿಯ ಮುಖಂಡರು, ಮೆರವಣಿಗೆಗೆ ಚಾಲನೆ ನೀಡಿ ಸೌಜನ್ಯಾ ಪರ ಘೋಷಣೆ ಕೂಗುತ್ತಾ ಪ್ರತಿಭಟನಾ ಸ್ಥಳಕ್ಕೆ ಬಂದರು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯಾ ತಾಯಿ ಕುಸುಮಾವತಿ, ತಮ್ಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಗೊಂದಲದ ವಾತಾವರಣ:

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂರಾರು ಕಾರ್ಯಕರ್ತೆಯರು ಪ್ರತಿಭಟನಾ ಸ್ಥಳದಲ್ಲಿ ನೆರೆದಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪೊಲೀಸರು ಕಾರ್ಯಕರ್ತೆಯರನ್ನು ಚದುರಿಸಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದರು. 

ಧರ್ಮಸ್ಥಳದ ಹೆಸರಿಗೆ ಧಕ್ಕೆ ತರುವ ಕೆಲಸ ಸಲ್ಲದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯೆಯರು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು
ಧರ್ಮಸ್ಥಳದ ಹೆಸರಿಗೆ ಧಕ್ಕೆ ತರುವ ಕೆಲಸ ಸಲ್ಲದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯೆಯರು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು

‘ಸೌಜನ್ಯಾ ಕೊಲೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಲಿ. ಆದರೆ, ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವಂತಹ ಕೆಲಸ ಸಲ್ಲದು’ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT