ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನಿರ್ದಿಷ್ಟ ಉದ್ಯೋಗ ಮೀಸಲಾತಿ: ವಿ.ಸುನಿಲ್ ಕುಮಾರ್

ಉಡುಪಿ: ರಾಜ್ಯದಲ್ಲಿರುವ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನಿರ್ದಿಷ್ಟ ಉದ್ಯೋಗ ಮೀಸಲಾತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವರು, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಕಾನೂನು ತೊಡಕುಗಳನ್ನು ನಿವಾರಿಸಲಾಗುವುದು ಎಂದರು.
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ಎಲ್ಲರಿಗೂ ನ್ಯಾಯ ಕೊಡಲಾಗಲಿಲ್ಲ. ಆದರೆ, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದ್ದು, ಪ್ರಶಸ್ತಿಗಳೇ ಸಾಧಕರನ್ನು ಹುಡುಕಿಕೊಂಡು ಹೋಗಿವೆ. ಪ್ರಭಾವ, ಒತ್ತಡಕ್ಕೆ ಮಣಿಯದೆ ಎಲೆಮರೆಕಾಯಿಯಂತಿದ್ದ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದರು.
ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವ ವಿಚಾರದಲ್ಲಿ ನಿರ್ಧಿಷ್ಟ ನಿಯಮಾವಳಿ ಇಲ್ಲ. ಮುಂದೆ, ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಹಂಚಿಕೆಯಲ್ಲಿ ಏಕರೂಪದ ನಿಯಮಾವಳಿ ಜಾರಿಗೆ ತರಲಾಗುವುದು ಎಂದರು.
ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಲಿದೆ, ಕಾಂಗ್ರೆಸ್ ಪಾಲಿಗೆ ನಿರಾಶೆಯಾಗಲಿದೆ. ಡಿ.ಕೆ.ಶಿವಕುಮಾರ್ ಈಗಾಗಲೇ ಪರೋಕ್ಷವಾಗಿ ಸೋಲೊಪ್ಪಿಕೊಂಡಿದ್ದಾರೆ. ಉಪ ಚುನಾವಣೆ ಫಲಿತಾಂಶ ಮುಂದಿನ ತಾಲ್ಲೂಕು, ಜಿಲ್ಲಾ ಹಾಗೂ ವಿಧಾನ ಪರಿಷತ್ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ಸುನಿಲ್ ಕುಮಾರ್ ಹೇಳಿದರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.