ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಸರ್ಕಾರಿ ಅಭಿಯೋಜಕ ಹುದ್ದೆಗೆ ರಾಜೀನಾಮೆ

Last Updated 29 ಡಿಸೆಂಬರ್ 2019, 9:29 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾಗಿದ್ದ ವಿಜಯ ವಾಸು ಪೂಜಾರಿ ಶನಿವಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜಕೀಯ ಒತ್ತಡ ಹಾಗೂ ಅಭಿಯೋಜಕರ ಹುದ್ದೆಗೆ ನೇಮಕ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ನಿರ್ದೇಶಕರಿಗೆ ರವಾನಿಸಿದ್ದು, ಪ್ರತಿಯನ್ನು ಅಂಚೆ ಮೂಲಕ ಕಳುಹಿಸುವುದಾಗಿ ತಿಳಿಸಿದ್ದಾರೆ.

2015, ಮೇ 22ರಂದು ಜಿಲ್ಲಾ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನಿಯುಕ್ತಿಗೊಂಡಿದ್ದು, ನಾಲ್ಕೂವರೆ ವರ್ಷದ ಕಾರ್ಯ ತೃಪ್ತಿ ತಂತಿದೆ. ಅಪ್ರಾಪ್ತ ಮೇಲೆ ನಡೆದ ಲೈಂಗಿಕ ದೌರ್ಜನ್ಯ, ಸಾಮೂಹಿಕ ಅತ್ಯಾಚಾರದಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ಕೊಡಿಸಿದ ತೃಪ್ತಿ ಇದೆ ಎಂದು ತಿಳಿಸಿದ್ದಾರೆ.

ಹಿಂದೆ, ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಆರೋಪಿ ವಿಜಯ ವಾಸು ಪೂಜಾರಿ ಮೇಲೆ ಶೂ ಎಸೆದಿದ್ದ. ಅವರ ಕಚೇರಿಯ ನಾಮಫಲಕವನ್ನು ಕೆಲವರು ಪುಡಿಗೈದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT