ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪು: ಎಚ್‌.ಡಿ. ಕುಮಾರಸ್ವಾಮಿ ಆರೋಗ್ಯ ವೃದ್ಧಿಗೆ ವಿಶೇಷ ಪೂಜೆ

Published 9 ಸೆಪ್ಟೆಂಬರ್ 2023, 12:51 IST
Last Updated 9 ಸೆಪ್ಟೆಂಬರ್ 2023, 12:51 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವೃದ್ಧಿ ಹಾಗೂ ಉತ್ತಮ ಆಯುಷ್ಯಕ್ಕಾಗಿ ಜಿಲ್ಲಾ ಜೆಡಿಎಸ್‌ ವತಿಯಿಂದ ಶನಿವಾರ ಮಹತೋಭಾರ ಲಕ್ಷ್ಮಿ ಜನಾರ್ದನ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇತೃತ್ವ ವಹಿಸಿದ್ದರು. ಪೂಜೆಯ ನಂತರ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ಜರಗಿತು.

ಜೆಡಿಎಸ್‌ ರಾಜ್ಯ ನಾಯಕರುಗಳಾದ ಸುಧಾಕರ್ ಶೆಟ್ಟಿ, ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಕಾರ್ಕಳ ಬ್ಲಾಕ್ ಅಧ್ಯಕ್ಷ ಶ್ರೀಕಾಂತ ಹೆಬ್ರಿ, ಕಾಪು ಬ್ಲಾಕ್ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಕುಂದಾಪುರ, ಜಿಲ್ಲಾ ನಾಯಕರುಗಳಾದ ಉದಯ ಆರ್. ಶೆಟ್ಟಿ, ರಜಾಕ್ ಉಚ್ಚಿಲ, ದೇವರಾಜ್ ಕಾಪು, ರಾಮರಾವ್, ವಿಶಾಲಾಕ್ಷಿ, ವಿಮಲಾ ಮಜೂರು, ಹರೀಶ್ ಹೆಗಡೆ, ಪ್ರಶಾಂತ್ ಕಾಪು, ಪ್ರಭಾಕರ್ ಶೆಟ್ಟಿ, ರವಿಚಂದ್ರ, ಅಶ್ರಫ್ ಪಡುಬಿದ್ರಿ ಪ್ರಶಾಂತ್ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ,  ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT