ಹೆಬ್ರಿ: ಇಲ್ಲಿನ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಕ್ರೀಡಾ ಭಾರತಿ ತಾಲ್ಲೂಕು ಘಟಕದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಪದವಿ ಪೂರ್ವ ವಿದ್ಯಾರ್ಥಿಗಳ ವಾಲಿಬಾಲ್ ಟೂರ್ನಿ ನಡೆಯಿತು.

ಅಂತರರಾಷ್ಟ್ರೀಯ ಕ್ರೀಡಾಪಟು ಪೆರ್ಡೂರು ಪದ್ಮನಾಭ ಭಂಡಿ, ಧ್ಯಾನಚಂದ್ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಪಂದ್ಯ ಉದ್ಘಾಟಿಸಿದರು. ಕ್ರೀಡಾ ಭಾರತಿ ವತಿಯಿಂದ ಕ್ರೀಡಾ ಸಾಧಕ ವಿಖ್ಯಾತ ಶೆಟ್ಟಿ ಅವರ ತಾಯಿ ಗೀತಾ ಶೆಟ್ಟಿ ಅವರಿಗೆ ‘ಜೀಜಾ ಮಾತಾ’ ಪುರಸ್ಕಾರ ನೀಡಿ ಗೌರವಿಸಲಾಯಿತು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಮೂರ್ತಿ ರಾವ್ ಅವರಿಗೆ ‘ಅಮೃತ ದ್ರೋಣಾಚಾರ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಮೃತ ಭಾರತಿ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಸತೀಶ್ ಪೈ ಅಧ್ಯಕ್ಷತೆ ವಹಿಸಿದ್ದರು. ಅಮೃತ ಭಾರತಿ ವಿದ್ಯಾಲಯ ಅಧ್ಯಕ್ಷ ಶೈಲೇಶ್ ಕಿಣಿ, ಕ್ರೀಡಾ ಭಾರತಿ ವಿಭಾಗ ಪ್ರಮುಖ್ ಪ್ರಸನ್ನ ಶೆಣೈ, ಜಿಲ್ಲಾ ಅಧ್ಯಕ್ಷ ಮಂಜುನಾಥ ಶೆಟ್ಟಿ ಬೈಲೂರು, ಹೆಬ್ರಿ ಘಟಕದ ಅಧ್ಯಕ್ಷ ಸೀತಾನದಿ ವಿಠ್ಠಲ ಶೆಟ್ಟಿ, ಕಾರ್ಯದರ್ಶಿ ವಿಜಯ ಕುಮಾರ್ ಶೆಟ್ಟಿ, ಪ್ರಾಂಶುಪಾಲ ಅಮರೇಶ ಹೆಗ್ಡೆ ಇದ್ದರು.

ವಾಲಿಬಾಲ್ ಟೂರ್ನಿಯಲ್ಲಿ ಬಾಲಕರ ವಿಭಾಗದಲ್ಲಿ ಮುನಿಯಾಲು ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಥಮ, ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ, ಬಾಲಕಿಯರ ವಿಭಾಗದಲ್ಲಿ ಎಸ್.ಆರ್ ಪದವಿಪೂರ್ವ ಕಾಲೇಜು ಪ್ರಥಮ, ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡವು. ವಿಜಯ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ಸುಹಾಸ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.