ಸೋಮವಾರ, ಅಕ್ಟೋಬರ್ 3, 2022
21 °C
ವಿಜ್ಞಾನ ನಾಟಕ ಸ್ಪರ್ಧೆ: ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿನ ತಂಡಕ್ಕೆ ಪ್ರಥಮ ಸ್ಥಾನ

‘ರಂಗಭೂಮಿ ಮೂಲಕ ವಿಜ್ಞಾನದ ಮಹತ್ವ ಪಸರಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬ್ರಹ್ಮಾವರ: ವಿಜ್ಞಾನವು ಮನುಷ್ಯನ ಬದುಕಿನಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ರಂಗಭೂಮಿಯ ಮೂಲಕ ಅದನ್ನು ವಿದ್ಯಾರ್ಥಿಗಳಲ್ಲಿ ಪಸರಿಸಿದಾಗ ವೈಜ್ಞಾನಿಕ ಮನೋಭಾವದ ಸಮಾಜ ನಿರ್ಮಾಣ ಸಾಧ್ಯ ಎಂದು ಮಣಿಪಾಲ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ಮತ್ತು ಜಿಲ್ಲಾ ವಿಜ್ಞಾನ ಸಂಪನ್ಮೂಲ ವ್ಯಕ್ತಿ ನಾಗೇಂದ್ರ ಪೈ ಹೇಳಿದರು.

ಬ್ರಹ್ಮಾವರದ ಎಸ್‌ಎಂಎಸ್‌ ಆಂಗ್ಲಮಾಧ್ಯಮ ಶಾಲೆಯಲ್ಲಿ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಬ್ರಹ್ಮಾವರ ಎಸ್ಎಂಎಸ್ ಆಂಗ್ಲಮಾಧ್ಯಮ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ನಾಟಕ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಸ್ಎಂಎಸ್ ಆಂಗ್ಲಮಾಧ್ಯಮ ಶಾಲೆಯ ಪ್ರಾಚಾರ್ಯೆ ಅಭಿಲಾಷ ಎಸ್, ವಿಜ್ಞಾನ ನಾಟಕ ಸ್ಪರ್ಧೆಯ ನೋಡಲ್ ಅಧಿಕಾರಿ ಹಾಗೂ ಪೆರ್ಡೂರು ಹೋಬಳಿಯ ಶಿಕ್ಷಣ ಸಂಯೋಜಕಿ ಬಿಂದಿಯಾ, ಮಂದಾರ್ತಿ ಹೋಬಳಿಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ತೀರ್ಪುಗಾರರಾದ ಮಣಿಪಾಲದ ನಾಗೇಂದ್ರ ಪೈ, ಸಾಸ್ತಾವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವನಿತಾ ಶೆಟ್ಟಿ ಇದ್ದರು. ಅಭಿಲಾಷ ಎಸ್ ಸ್ವಾಗತಿಸಿದರು. ಬಿಂದಿಯಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ರವಿ ಕಟ್ಕೆರೆ ನಿರೂಪಿಸಿದರು.

ಫಲಿತಾಂಶ: 

ಸ್ಪರ್ಧೆಯಲ್ಲಿ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ, ಬ್ರಹ್ಮಾವರ ಎಸ್ಎಂಎಸ್ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಮತ್ತು ಕೋಟ ವಿವೇಕ ಬಾಲಕರ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.