ಮಂಗಳವಾರ, ಆಗಸ್ಟ್ 3, 2021
28 °C
12 ರೂಟ್‌ಗಳಿಗೆ ಬಸ್‌ ವ್ಯವಸ್ಥೆ

ಉಡುಪಿ: ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭ, 1,448 ಶಿಕ್ಷಕರು ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯ 6 ಕೇಂದ್ರಗಳಲ್ಲಿ ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ. ಕುಂದಾಪುರ, ಕಾರ್ಕಳ, ಬ್ರಹ್ಮಾವರ, ಬೈಂದೂರು, ಕಾಪು, ಹೆಬ್ರಿ ಹಾಗೂ ಉಡುಪಿ ತಾಲ್ಲೂಕುಗಳಿಂದ 1,448 ಶಿಕ್ಷಕರು ಮೌಲ್ಯಮಾಪನದಲ್ಲಿ ತೊಡಗಿದ್ದಾರೆ ಎಂದು ಡಿಡಿಪಿಐ ಶೇಷಶಯನ ಕಾರಿಂಜ ತಿಳಿಸಿದರು.

ಉಡುಪಿಯ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿರುವುದರಿಂದ ಬೇರೆ ತಾಲ್ಲೂಕುಗಳಿಂದ ಶಿಕ್ಷಕರನ್ನು ಕರೆತರಲು 12 ರೂಟ್‌ಗಳಲ್ಲಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 6 ದಿನಗಳಲ್ಲಿ ಮುಖ್ಯ ವಿಷಯಗಳ ಮೌಲ್ಯಮಾಪನ ಮುಗಿಯಲಿದ್ದು, 10 ದಿನಗಳಲ್ಲಿ ಎಲ್ಲ ವಿಷಯಗಳ ಮೌಲ್ಯಮಾಪನ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಖಾಸಗಿ ಸೇರಿ 14,034 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು