ಭಾನುವಾರ, ಆಗಸ್ಟ್ 1, 2021
26 °C
ಎಸ್ಸೆಸ್ಸೆಲ್ಸಿ ಪರೀಕ್ಷೆ: ಕಂಟೈನ್‌ಮೆಂಟ್‌ ವಲಯದ 10 ಮಕ್ಕಳಿಗೆ ಪ್ರತ್ಯೇಕ ಕೊಠಡಿ

12,947 ವಿದ್ಯಾರ್ಥಿಗಳು ಹಾಜರು, 795 ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ 12947 ವಿದ್ಯಾರ್ಥಿಗಳು ಹಾಜರಾಗಿದ್ದು, 795 ವಿದ್ಯಾರ್ಥಿಗಳು ಗೈರಾಗಿದ್ದಾರೆ. 

ಜಿಲ್ಲೆಯಲ್ಲಿ 13,742 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಬೈಂದೂರು ವಲಯದಿಂದ 1,933, ಕುಂದಾಪುರದಲ್ಲಿ 2,299, ಕಾರ್ಕಳದಲ್ಲಿ 2,577, ಉಡುಪಿ ಉತ್ತರದಲ್ಲಿ 2,640, ಉಡುಪಿ ದಕ್ಷಿಣ ಕ್ಷೇತ್ರದಲ್ಲಿ 3,498 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಬೇರೆ ಜಿಲ್ಲೆಗಳಿಂದ ಬಂದಿದ್ದ 82 ವಲಸೆ ವಿದ್ಯಾರ್ಥಿಗಳು ಸಹ ಪರೀಕ್ಷೆಗೆ ಹಾಜರಾಗಿದ್ದರು. 

ಕಂಟೈನ್‌ಮೆಂಟ್ ಝೋನ್‌ಗಳಿಂದ 10 ವಿದ್ಯಾರ್ಥಿಗಳು ಹಾಗೂ ರೋಗದ ಲಕ್ಷಣಗಳಿದ್ದ 14 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು