ಶನಿವಾರ, ಜುಲೈ 31, 2021
25 °C
ರೋಗದ ಲಕ್ಷಣಗಳಿದ್ದವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ

ಎಸ್ಸೆಸ್ಸೆಲ್ಸಿ: 12,771 ಹಾಜರು; 94 ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆಯ ವಿಷಯದಲ್ಲಿ 12,771 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 94 ವಿದ್ಯಾರ್ಥಿಗಳು ಗೈರಾಗಿದ್ದರು.

ಪರೀಕ್ಷೆ ಬರೆಯಲು 13,548 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದರು. ಇವರಲ್ಲಿ ಹೊರ ಜಿಲ್ಲೆಗಳಲ್ಲಿ 588 ಮಂದಿ ಪರೀಕ್ಷೆ ಬರೆದಿದ್ದು, ಹಾಜರಾತಿ ಕೊರತೆ ಕಾರಣದಿಂದ 55 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇರಲಿಲ್ಲ ಎಂದು ಡಿಡಿಪಿಐ ಶೇಷಶಯನ ಕಾರಿಂಜ ಮಾಹಿತಿ ನೀಡಿದರು. 

ಕಂಟೈನ್‌ಮೆಂಟ್‌ ಪ್ರದೇಶಗಳಿಂದ 10 ಹಾಗೂ ಅನಾರೋಗ್ಯದ ಲಕ್ಷಣಗಳಿದ್ದ 14 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಪರೀಕ್ಷಾ ಅಕ್ರಮಗಳು ನಡೆದಿಲ್ಲ. 413 ಖಾಸಗಿ ಅಭ್ಯರ್ಥಿಗಳ ಪೈಕಿ 345 ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು 82 ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು