‘ಕೊರಗರ ಶಿಕ್ಷಣ ಆರೋಗ್ಯಕ್ಕೆ ಆದ್ಯತೆ ನೀಡಿ’
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೊರಗ ಸಮುದಾಯದವರಿಗೆ ಮಂಜೂರಾಗಿರುವ ಜಾಗದಲ್ಲಿ ಪುನರ್ವಸತಿ ಕಾರ್ಯಕ್ಕಾಗಿ ಸರ್ಕಾರವು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು. ಪ್ರತ್ಯೇಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳದ ಸಂಯೋಜಕ ಕೆ. ಪುತ್ರನ್ ಆಗ್ರಹಿಸಿದ್ದಾರೆ. ಈ ಹಿಂದೆ ಕೊರಗ ಸಮುದಾಯದವರು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದರೂ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಈ ಯೋಜನೆಗೆ ಬಲ ತುಂಬಲು ಅನುದಾನ ಘೋಷಿಸಬೇಕು. ಕೊರಗ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿಶೇಷ ಅನುದಾನ ಮೀಸಲಿರಿಸಿ ಯೋಜನೆಯನ್ನು ಘೋಷಿಸಬೇಕು ಎಂದು ಅವರು ಹೇಳಿದ್ದಾರೆ.