ಕಾರ್ಕಳ: ಶ್ರೀಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ನೀಡಲಾಗುವ ‘ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ’ ತಾಲ್ಲೂಕಿನ ನಾಲ್ಕು ಶಾಲೆಗಳಿಗೆ ಲಭಿಸಿದೆ.
ಪ್ರಶಸ್ತಿ ಪಡೆದ ಸಂಸ್ಥೆಗಳು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಲ್ಲೂರು, ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಲೂರು, ಸರ್ಕಾರಿ ಪ್ರೌಢಶಾಲೆ ಪೆವಾಜೆ ಹಾಗೂ ಸರ್ಕಾರಿ ಪ್ರೌಢಶಾಲೆ ನಲ್ಲೂರು.
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಮಧುಸೂದನ ಸಾಯಿ ಪ್ರಶಸ್ತಿ ಪ್ರದಾನ ಮಾಡಿದರು.
ನಲ್ಲೂರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ನಾಗೇಶ್ ಪ್ರಶಸ್ತಿ ಸ್ವೀಕರಿಸಿದರು.