ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಬ್ರಿ: ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ 

Published : 10 ಸೆಪ್ಟೆಂಬರ್ 2024, 13:41 IST
Last Updated : 10 ಸೆಪ್ಟೆಂಬರ್ 2024, 13:41 IST
ಫಾಲೋ ಮಾಡಿ
Comments

ಹೆಬ್ರಿ:‌ ಭಾರತೀಯ ಕಲೆ, ಸಾಹಿತ್ಯ, ಸಾಂಸ್ಕೃತಿಕ ಸಂಘಟನಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ರಾಯಚೂರು ಕಲಾ ಸಂಕುಲ ಸಂಸ್ಥೆ ವತಿಯಿಂದ ನಡೆದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯ ಇಂಗ್ಲಿಷ್‌ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅವರಿಗೆ ‘ರಾಜ್ಯಮಟ್ಟದ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಪ್ರಶಸ್ತಿ ಪ್ರದಾನ ಮಾಡಿದರು. ಶೈಕ್ಷಣಿಕ, ಧಾರ್ಮಿಕ, ಸಾಹಿತ್ಯಿಕ, ಸಂಘಟನೆ, ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿನ ಸಾಧನೆ ಗುರುತಿಸಿ ಚಂದ್ರಶೇಖರ ಭಟ್‌ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಸಂಪನ್ಮೂಲ ಶಿಕ್ಷಕ, ತರಬೇತುದಾರ, ಉತ್ತಮ ಸಂಘಟಕ, ಕಾರ್ಯಕ್ರಮ ನಿರೂಪಕರಾಗಿರುವ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ ಗೌರವ ಸಲಹೆಗಾರರಾಗಿ, ಮಾರ್ಗದರ್ಶಕರಾಗಿ, ಪದಾಧಿಕಾರಿಯಾಗಿ ದುಡಿಯುತ್ತಿದ್ದಾರೆ.

ಹರೇಕಳ ಹಾಜಬ್ಬ, ರಾಯಚೂರು ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಡಾ.ಶರಣ ಬಸವ ಪಾಟೀಲ್ ಜೋಳದಡಗಿ, ಸಮಾಜ ಸೇವಕ ಚನ್ನಬಸಪ್ಪ, ನಟಿ ಡಾ.ರಜನಿ ಡಿ, ಮಂಗಳೂರು ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ನಫೀಜಾ, ನರರೋಗ ತಜ್ಞ ವಿಜಯ ಶಂಕರ್, ಶಿಕ್ಷಕಿ ಸಂಗೀತಾ ಶರ್ಮ, ಉಡುಪಿಯ ಸ್ಯಾಕ್ಸೊಫೋನ್ ಕಲಾವಿದೆ ಭಾರತಿ ಗೋಪಾಲ್ ಸೇರಿಗಾರ್‌ ಶಿವಪುರ, ಕಲಾ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT