ಕುಂದಾಪುರ: ಆಂತರಿಕ ಸಮಸ್ಯೆಯಿಂದ ನಲುಗಿ ಹೋಗಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಮಾಡುತ್ತಿರುವ ಹಿಂಸೆ, ಅತ್ಯಾಚಾರ, ಆಸ್ತಿಪಾಸ್ತಿ ಹಾನಿ ಹೇಯ ಕೃತ್ಯ. ಅಲ್ಲಿ ನಡೆಯುತ್ತಿರುವ ನಿರ್ದಿಷ್ಟ ಗುರಿ ಕೇಂದ್ರಿಕೃತ ಹಿಂಸೆ ತಡೆಯಲು ಭಾರತ ಸರ್ಕಾರ ಬಾಂಗ್ಲಾದೇಶದ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.