ಮಂಗಳವಾರ, ಸೆಪ್ಟೆಂಬರ್ 28, 2021
25 °C

ಕಾರ್ಕಳ: ಅರ್ಬಿ ಫಾಲ್ಸ್‌ಗೆ ಬಿದ್ದು ವಿದ್ಯಾರ್ಥಿನಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರ್ಕಳ: ಅರ್ಬಿ ಫಾಲ್ಸ್ ವೀಕ್ಷಣೆಗೆ ಇಬ್ಬರು ಸ್ನೇಹಿತರೊಂದಿಗೆ ತೆರಳಿದ ತಾಲ್ಲೂಕಿನ ಕಾಲೇಜೊಂದರ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಸೋಮವಾರ ಸಂಜೆ ನಿಟ್ಟೆ ಗ್ರಾಮದ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ.

ಮಂಗಳೂರಿನ ವರ್ಷಿತಾ (19) ಮೃತಪಟ್ಟವರು. ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯಾಗಿದ್ದ ಈಕೆಗೆ ಈಜು ಗೊತ್ತಿತ್ತು. ಆದರೂ ನೀರಿನ ಸುಳಿಯಿಂದ ಮೇಲೆ ಬರಲಾಗದೆ ಮುಳುಗಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರ್ಕಳ ಅಗ್ನಿ ಶಾಮಕ ದಳ ಸಿಬ್ಬಂದಿ ಬಂದು ಸಾರ್ವಜನಿಕರ ನೆರವಿನಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು