ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ನದಿಗೆ ಹಾರಿದ ವಿದ್ಯಾರ್ಥಿ

Last Updated 8 ಸೆಪ್ಟೆಂಬರ್ 2022, 15:56 IST
ಅಕ್ಷರ ಗಾತ್ರ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದ ವಿದ್ಯಾರ್ಥಿ ಗುರುವಾರ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಹೇರಿಕುದ್ರು ಬಳಿ ಸೇತುವೆ ಮೇಲಿನಿಂದ ನದಿಗೆ ಹಾರಿದ್ದಾನೆ.

ನಗರದ ವಡೇರಹೋಬಳಿಯ ಜೆಎಲ್‌ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ ಅವರ ಪುತ್ರ ಸಾಯೀಶ್ ಶೆಟ್ಟಿ (18) ನದಿಗೆ ಹಾರಿದ ವಿದ್ಯಾರ್ಥಿ.

ಗುರುವಾರ ಮಧ್ಯಾಹ್ನ ಸೈಕಲ್‌ನಲ್ಲಿ ಹೇರಿಕುದ್ರು ಸೇತುವೆ ಬಳಿ ಬಂದ ಸಾಯೀಶ್ ಶೆಟ್ಟಿ ಸೈಕಲ್ ಹಾಗೂ ಮೊಬೈಲ್ ಅನ್ನು ಪಕ್ಕದಲ್ಲಿಟ್ಟು ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ್ದ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿರುವ ಪೊಲೀಸರ, ಮುಳುಗು ತಜ್ಞರು ಶೋಧ ನಡೆಸುತ್ತಿದ್ದಾರೆ.

ಬುಧವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಮಳೆಯೂ ಬೀಳುತ್ತಿರುವ ಕಾರಣ ಶೋಧ ಕಾರ್ಯಕ್ಕೆ ತೊಡಕಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್, ಎಸ್‌ಐ ಸದಾಶಿವ ಗವರೋಜಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶಿವಮೊಗ್ಗದ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದ ಸಾಯೀಶ್ ಶೆಟ್ಟಿ ಈಚೆಗೆ ನೀಟ್ ಪರೀಕ್ಷೆ ಬರೆದು ಉತ್ತಮ ಅಂಕಗಳ ನಿರೀಕ್ಷೆಯಲ್ಲಿದ್ದರು. ಫಲಿತಾಂಶ ಪ್ರಕಟವಾದ ಬಳಿಕ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂದು ಬೇಸರಗೊಂಡು ನದಿಗೆ ಹಾರಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT