ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಂದಾಪುರ: ಇವಿಎಂ ಆ್ಯಪ್ ಬಳಸಿ ವಿದ್ಯಾರ್ಥಿ ಸಂಸತ್ ಚುನಾವಣೆ

Published 9 ಜೂನ್ 2024, 14:09 IST
Last Updated 9 ಜೂನ್ 2024, 14:09 IST
ಅಕ್ಷರ ಗಾತ್ರ

ಕುಂದಾಪುರ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವಿಎಂ ಆ್ಯಪ್ ಬಳಸಿ ವಿದ್ಯಾರ್ಥಿ ಸಂಸತ್ ಚುನಾವಣೆ ನಡೆಸಲಾಯಿತು.

ಚುನಾವಣಾ ಅಧಿಸೂಚನೆ, ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚುನಾವಣಾ ಪ್ರಚಾರ, ಗೌಪ್ಯ ಮತದಾನ, ಮತ ಎಣಿಕೆ, ಪ್ರಮಾಣ ವಚನ ಎಲ್ಲ ಪ್ರಕ್ರಿಯೆಗಳನ್ನು ಕ್ರಮಬದ್ಧವಾಗಿ ನಡೆಸಲಾಯಿತು.

ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಮತ್ತು ಮತದಾನದ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಅರಿವು ಮೂಡಿಸುವ ಉದ್ದೇಶದಿಂದ ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್‌) ಬಳಸಲಾಯಿತು ಎಂದು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುಮನಾ ತಿಳಿಸಿದ್ದಾರೆ.

ನಾಯಕಿಯಾಗಿ ತನ್ವಿ, ಉಪನಾಯಕಿಯಾಗಿ ನಿಶ್ಮಿತಾ ಪ್ರಮಾಣ ವಚನ ಸ್ವೀಕರಿಸಿದರು. ಶಿಕ್ಷಕಿಯರಾದ ವಿನಯಾ, ಶ್ರೀಲತಾ, ಸುನೀತಾ, ಸನ್ನುತಾ, ಅಶ್ವಿನಿ ಹಾಗೂ ಉಷಾ ಮತದಾನ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT