ಭಾನುವಾರ, ಮೇ 29, 2022
20 °C

ಪರೀಕ್ಷೆಯಲ್ಲಿ ಕಡಿಮೆ ಅಂಕ: ವಿದ್ಯಾರ್ಥಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಹೆಬ್ರಿ: ಇಲ್ಲಿನ ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಯೊಂದರಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಅನ್ವಿತ್ ಶೆಟ್ಟಿ(14) ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮನನೊಂದು ಮರಣ ಪತ್ರ (ಡೆತ್‌ನೋಟ್‌) ಬರೆದಿಟ್ಟು ನೇಣು ಹಾಕಿಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಕೆರೆಬೆಟ್ಟು ನಿವಾಸಿ ಸತೀಶ ಶೆಟ್ಟಿ - ಮಮತಾ ಶೆಟ್ಟಿ ದಂಪತಿ ಪುತ್ರ. ಮನೆ ಸ್ನಾನದ ಕೋಣೆ ಕಬ್ಬಿಣದ ರಾಡ್‌ಗೆ ಚೂಡಿದಾರದ ವೇಲ್‌ನಿಂದ ನೇಣು ಹಾಕಿಕೊಂಡಿರುವುದನ್ನು ಕಿಟಕಿಯಿಂದ ನೋಡಿದ ಅನ್ವಿತ್ ಶೆಟ್ಟಿ ಸಹೋದರ ಮನೆಯವರಿಗೆ ಸುದ್ದಿ ತಿಳಿಸಿದ್ದ.

ಪೋಷಕರು ಕೂಡಲೇ ಹೆಬ್ರಿ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು, ಪರೀಕ್ಷೆ ನಡೆಸಿದ  ತಂದರು ವೈದ್ಯರು ಮೃತಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.