ಭಾನುವಾರ, ಅಕ್ಟೋಬರ್ 24, 2021
20 °C

ಪ್ರಥಮ ಡೋಸ್‌ ಶೇ 100 ಸಾಧನೆ: ಸಚಿವ ಸುಧಾಕರ್ ಶ್ಲಾಘನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಪ್ರಥಮ ಡೋಸ್‌ ಕೋವಿಡ್‌ ಲಸಿಕೆ ನೀಡುವಲ್ಲಿ ಉಡುಪಿ ಜಿಲ್ಲೆ ಶೇ 100 ಗುರಿ ಸಾಧನೆ ಮಾಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ಟರ್‌ನಲ್ಲಿ ಶ್ಲಾಘಿಸಿದ್ದಾರೆ.

ರಾಜ್ಯದಲ್ಲಿ ಬೆಂಗಳೂರು ನಗರ ಜಿಲ್ಲೆ ಹಾಗೂ ಉಡುಪಿ ಜಿಲ್ಲೆ ಮಾತ್ರ ಶೇ 100ರಷ್ಟು ಲಸಿಕೆ ಗುರಿ ಮುಟ್ಟಿದ್ದು, ಸಾಧನೆಗೆ ಕಾರಣರಾದ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾಡಳಿತಕ್ಕೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ಮೊದಲ ಡೋಸ್ ಲಸಿಕೆ ಪಡೆಯಲು ಅರ್ಹ 9,01,568 ಮಂದಿ ಇದ್ದು, 9,08,139 ಮಂದಿಗೆ ಮೊದಲ ಡೋಸ್ ಹಾಕಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು