ಉಡುಪಿ: ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 63ನೇ ಜನ್ಮದಿನದ ಸಂದರ್ಭದಲ್ಲಿ ಸಹಪಾಠಿಗಳಾದ ಅದಮಾರು ಮಠಾಧೀಶ ವಿಶ್ವಪ್ರಿಯತೀರ್ಥ ಶ್ರೀಪಾದರನ್ನು ಹಾಗೂ ಭಂಡಾರಕೇರಿ ಮಠಾಧೀಶರಾದ ವಿದ್ಯೇಶತೀರ್ಥ ಶ್ರೀಪಾದರನ್ನು ಗಂಧಾದ್ಯುಪಚಾರಗಳಿಂದ ಗೌರವಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡರು.

ಪುತ್ತಿಗೆ ಕಿರಿಯ ಶ್ರೀಪಾದರಾದ ಸುಶ್ರಿಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅನೇಕ ವಿದ್ವಾಂಸರ ಹಾಗೂ ಪುತ್ತಿಗೆ ವಿದ್ಯಾಪೀಠದ ಹಳೆವಿದ್ಯಾರ್ಥಿಗಳ ಸಮ್ಮುಖದಲ್ಲಿ ಶ್ರೀಕೃಷ್ಣಮಠದಲ್ಲಿ ಜರುಗಿದ ಈ ಸಮಾರಂಭದಲ್ಲಿ ಪರ್ಯಾಯ ಮಠದ ವತಿಯಿಂದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನಾಚಾರ್ಯರು ಅದಮಾರು ಮತ್ತು ಭಂಡಾರಕೇರಿ ಶ್ರೀಪಾದರಿಗೆ ಮಾಲಿಕೆ ಮಂಗಳಾರತಿ ಮಾಡಿ ಸಂಸ್ಥಾನ ಗೌರವವನ್ನು ಅರ್ಪಿಸಿದರು.

ಶ್ರೀಪಾದರಿಗೆ ಪುತ್ತಿಗೆ ವಿದ್ಯಾಪೀಠದ ಹಳೆವಿದ್ಯಾರ್ಥಿಗಳು ಮತ್ತು ಮಠದ ಸಿಬ್ಬಂದಿ ಮಾಲಿಕೆ ಮಂಗಳಾರತಿಯೊಂದಿಗೆ ವಿಶೇಷ ಗೌರವವನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಶ್ರೀಪಾದರ ಎರಡು ಕೃತಿಗಳನ್ನು ಆದಮಾರು ಹಿರಿಯ ಶ್ರೀಪಾದರು ಮತ್ತು ಭಂಡಾರಕೇರಿ ಶ್ರೀಪಾದರು ಬಿಡುಗಡೆಗೊಳಿಸಿದರು. ಕೃತಿಸಂಗ್ರಹ ಮಾಡಿ ಪ್ರಕಟಿಸಲು ಶ್ರಮಿಸಿದ ಓಂಪ್ರಕಾಶ ಭಟ್ಟರನ್ನು ಪುತ್ತಿಗೆ ಶ್ರೀಗಳು ಗೌರವಿಸಿದರು. ಮಠದ ವಿದ್ವಾಂಸರಾದ ವಿದ್ವಾನ್ ಬಿ. ಗೋಪಾಲಾಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.